ETV Bharat / state

ಮೂರನೇ ಅಲೆ ಆತಂಕ: ಮಕ್ಕಳಿಗಾಗಿ ವಿಶೇಷ ಘಟಕ ಆರಂಭಿಸಲು ಎಂ.ಬಿ.ಪಾಟೀಲ ಸಭೆ

ಮಕ್ಕಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ಕೋವಿಡ್ ವಿಶೇಷ ಘಟಕ ಆರಂಭಿಸಲು ಈಗಲೇ ಕ್ರಮ ಕೈಗೊಳ್ಳಬೇಕು ಎಂದು ಬಿಎಲ್​ಡಿಇ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಎಂ.ಬಿ.ಪಾಟೀಲ ಸಭೆ
ಎಂ.ಬಿ.ಪಾಟೀಲ ಸಭೆ
author img

By

Published : May 14, 2021, 5:07 PM IST

ವಿಜಯಪುರ: ಕೊರೊನಾ ಮೂರನೇ ಅಲೆಯಲ್ಲಿ ಚಿಕ್ಕಮಕ್ಕಳು ಹೆಚ್ಚು ತೊಂದರೆ ಅನುಭವಿಸುವ ಸಾಧ್ಯತೆ ಇರುವ ಕಾರಣ ನಗರದ ಪ್ರತಿಷ್ಠಿತ ಬಿಎಲ್​ಡಿಇ ಆಸ್ಪತ್ರೆಯನ್ನು ಈಗಲೇ ಮಕ್ಕಳ ಆರೈಕೆ ಕೇಂದ್ರವನ್ನಾಗಿ ಮಾಡಲು ಸಿದ್ಧತೆ ನಡೆಸಲಾಗಿದೆ. ಸದ್ಯ ನಾಲ್ಕು ಮಕ್ಕಳು ಕೊರೊನಾದಿಂದ ಭಾದಿತರಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಕ್ಕಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ಕೋವಿಡ್ ವಿಶೇಷ ಘಟಕ ಆರಂಭಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಮೂರನೆ ಅಲೆಯ ನಿಯಂತ್ರಣ ಮಾಡುವ ಕುರಿತು ಬಿಎಲ್​ಡಿಇ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ವೈದ್ಯರು ಹಾಗೂ ತಜ್ಞರ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚು ಬಾಧಿತರಾಗುವ ಕುರಿತು ವರದಿಗಳು ಬರುತ್ತಿದ್ದು, ಇದನ್ನು ಗಮನದಲ್ಲಿರಿಸಿ, ನಾವು ಈಗಿನಿಂದಲೇ ಮಕ್ಕಳ ಚಿಕಿತ್ಸೆಗೆ ಹೆಚ್ಚು ನಿಗಾ ವಹಿಸಬೇಕು, ಯಾವುದೇ ಮಗು ಚಿಕಿತ್ಸೆಯಿಂದ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲೆ ಇದೆ. ಅದರ ಅನುಸಾರ ಹೆಚ್ಚಿನ ಬೆಡ್​ಗಳು, ಆಕ್ಸಿಜನ್ ಮತ್ತು ವೆಂಟಿಲೇಟರ್ ವ್ಯವಸ್ಥೆ ಮಾಡಲು ಚಿಕ್ಕಮಕ್ಕಳ ವಿಭಾಗವನ್ನು ಈಗಿನಿಂದಲೇ ಸನ್ನದ್ಧಗೊಳಿಸಲು ಎಂ.ಬಿ ಪಾಟೀಲ ಸೂಚಿಸಿದರು.

ವಿಶೇಷವಾಗಿ ಕೊರೊನಾ 3ನೇ ಅಲೆಯಲ್ಲಿ ಮಕ್ಕಳಿಗೆ ಆಗುವ ತೊಂದರೆಗಳು ಮತ್ತು ಸೂಕ್ತ ಚಿಕಿತ್ಸೆ ಕುರಿತು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ತಜ್ಞ ವೈದ್ಯರೊಂದಿಗೆ ನಮ್ಮ ವೈದ್ಯರ ತಂಡ ಸಮಾಲೋಚನೆ, ಮಾಹಿತಿ, ನೆರವು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೂಡಲೇ ಕಾರ್ಯಾಗಾರಗಳನ್ನು ಸಂಘಟಿಸಲು ಎಂ.ಬಿ ಪಾಟೀಲ ಸೂಚಿಸಿದರು.

ವೈದ್ಯಕೀಯ ಕಾಲೇಜು ಪ್ರಾಚಾರ್ಯ ಡಾ.ಅರವಿಂದ ಪಾಟೀಲ್​ ಮಾತನಾಡಿ, ಮೂರನೇ ಅಲೆಯನ್ನು ಗಮನಿಸಿ, ಮಕ್ಕಳ ಚಿಕಿತ್ಸಾ ವಿಭಾಗವನ್ನು ಅಲರ್ಟ್ ಗೊಳಿಸಲಾಗಿದೆ. ಈಗಾಗಲೇ ನಮ್ಮ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳು ದಾಖಲಾಗಿ, ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರಂಭಿಕ ಹಂತದಲ್ಲಿ 60 ಆಕ್ಸಿಜನ್ ಬೆಡ್​ಗಳನ್ನು ಸಜ್ಜು ಗೊಳಿಸಲಾಗಿದೆ. ಅಗತ್ಯವಿದ್ದರೆ ಇನ್ನೂ 60 ಬೆಡ್​ಗಳಿಗೆ ವಿಸ್ತರಿಸಿ, ಒಟ್ಟು 120 ಆಕ್ಸಿಜನ್ ಸಹಿತ ಮಕ್ಕಳ ಚಿಕಿತ್ಸಾ ವಾರ್ಡ್ ಆರಂಭಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಚಿಕಿತ್ಸೆಗೆ ಅಗತ್ಯವಿರುವ ಔಷಧ ದಾಸ್ತಾನು ಸಂಗ್ರಹಿಸಲಾಗುವುದು. ಅಲ್ಲದೇ ಸರಣಿ ಕಾರ್ಯಾಗಾರಗಳನ್ನು ಏರ್ಪಡಿಸಿ, ತಜ್ಞ ವೈದ್ಯರೊಂದಿಗೆ ಮಕ್ಕಳ ವೈದ್ಯರು, ಶುಶ್ರೂಷಕ ಸಿಬ್ಬಂದಿ ಹಾಗೂ ತಜ್ಞರನ್ನು ಸನ್ನದ್ಧಗೊಳಿಸಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.