ETV Bharat / state

ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆಗೆ ಯಾವುದೇ ನಿರ್ಬಂಧವಿಲ್ಲ: ಬಿ.ಸಿ.ಪಾಟೀಲ್

ಬದುಕು, ಜೀವನ ಎರಡು ಅಂಶಗಳು ಮುಖ್ಯವಾಗಿದ್ದು, ಸದ್ಯಕ್ಕೆ ಬಂದೆರೆಗಿರುವ ಮಹಾಮಾರಿ ಕೊರೊನಾ ನಿವಾರಣೆಗೆ ಪ್ರಥಮ ಆದ್ಯತೆ ನೀಡಲಾಗಿದ್ದು, ಆತ್ಮಸ್ಥೈರ್ಯದಿಂದ ಕೊರೊನಾ ಎದುರಿಸಬೇಕಾಗಿದೆ. ಈ ದಿಸೆಯಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗುವುದು ಎಂದು ಸಚಿವರು ತಿಳಿಸಿದರು.

M B Patil
ಕೃಷಿ ಸಚಿವರ ಜತೆ ಅಧಿಕಾರಿಗಳ ಸಭೆ
author img

By

Published : Apr 7, 2020, 7:14 PM IST

ವಿಜಯಪುರ: ಕೃಷಿ ಚಟುವಟಿಕೆಗಳಿಗೆ ವಿಶೇಷವಾಗಿ ಬೇಸಾಯ, ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ತಿಳಿಸಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್​ ಸಾಮಾಜಿಕ ಅಂತರ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ರೈತರಲ್ಲಿ ಮನವಿ ಮಾಡಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಎಪಿಎಂಸಿ, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಕೋವಿಡ್-19 ಮುನ್ನೆಚ್ಚರಿಕೆಯಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ರೈತರಲ್ಲಿ ಆತ್ಮಸ್ಥೈರ್ಯ ತುಂಬಲು ಕೃಷಿ ಚಟುವಟಿಕೆ, ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಾಗಾಣಿಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ತಿಳಿಸಿದ ಅವರು ಅಧಿಕಾರಿಗಳು ರೈತರಿಗೆ ಎಲ್ಲ ರೀತಿಯಿಂದ ನೆರವಾಗಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳಲು ಎಂದರು.

ರಾಜ್ಯದಲ್ಲಿ ರೈತರ ಕೃಷಿ ಬೆಳೆ, ತೋಟಗಾರಿಕಾ ಬೆಳೆ ಹಾಗೂ ಮುಕ್ತ ಮಾರುಕಟ್ಟೆ ಸೌಲಭ್ಯ ಒದಗಿಸುವದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಸದ್ಯಕ್ಕೆ ಕೊರೊನಾ ನಿಯಂತ್ರಣ ಮತ್ತು ನಿವಾರಣೆಗೆ ಹೆಚ್ಚಿನ ಗಮನ ನೀಡುತ್ತಿದ್ದು, ಹಠಾತ್ತಾಗಿ ಬಂದಿರುವಂತಹ ಈ ಪರಿಸ್ಥಿತಿ ವಿಶ್ವದಾದ್ಯಂತ ತಲ್ಲಣಗೊಳಿಸಿದೆ. ಕಾರಣ ಎಲ್ಲರೂ ಸಂಯಮದಿಂದ ಮತ್ತು ಮುಂಜಾಗ್ರತೆಯಿಂದ ಇರುವಂತೆ ತಿಳಿಸಿದ ಅವರು ಕ್ರಮೇಣ ಎಲ್ಲ ತೊಂದರೆಗಳು ನಿವಾರಣೆಯಾಗಲಿದ್ದು, ರೈತರಿಗೂ ಸಹ ಸಹಕಾರಿಯಾಗಲಿದೆ ಎಂದು ಹೇಳಿದರು.

ರೈತ ಸಮುದಾಯಕ್ಕೆ ತೊಂದರೆಯಾದಲ್ಲಿ ಇಡೀ ದೇಶಕ್ಕೆ ತೊಂದರೆ ಇದ್ದಂತೆ ಕಾರಣ ರೈತ ಸಮುದಾಯಕ್ಕೆ ಅನುಕೂಲವಾಗಲು ಕೃಷಿ ಉತ್ಪನ್ನಗಳ ಸುಗಮ ಮಾರಾಟ ಮತ್ತು ಸಾಗಾಣಿಕೆಗೆ ಅಂತರಾಜ್ಯ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಜಿಲ್ಲೆಯಲ್ಲಿ ಕಡಲೆ ಖರೀದಿ ಕೇಂದ್ರಗಳನ್ನು ತಕ್ಷಣ ತೆರೆಯಲು ಸೂಚಿಸಿದ ಅವರು ಹಾಪ್‍ಕಾಮ್ಸ್​ ಗಳಲ್ಲಿ ತರಕಾರಿ, ಹಣ್ಣು ಮತ್ತು ಮೊಟ್ಟೆ ಮಾರಾಟಕ್ಕೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು ಪರಿಸ್ಥಿತಿಯ ದುರ್ಲಾಭಪಡೆದು ರೈತರಿಗೆ ತೊಂದರೆ ನೀಡುತ್ತಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಕೃಷಿಗೆ ಸಂಬಂಧಿಸಿದ ವಿವಿಧ ಸೊಸೈಟಿಗಳ ಚಟುವಟಿಕೆಗೆ ಯಾವುದೇ ತೊಂದರೆ ಇರುವುದಿಲ್ಲ ಎಂದು ತಿಳಿಸಿದರು.

ಹಂಗಾಮಿನಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಇನ್ನಿತರ ಸಾಧನ, ಸಲಕರಣೆಗಳ ಸದ್ಭಳಕೆಗೆ ರೈತರಿಗೆ ಸಕಾಲಕ್ಕೆ ನೆರವಾಗಲು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ದ್ರಾಕ್ಷಿ ಬೆಳೆ ಸಾಗಣೆ, ಮಾರುಕಟ್ಟೆ ತೊಂದರೆ ನಿವಾರಣೆ ಮತ್ತು ವಿಜಯಪುರದಲ್ಲಿ ನಡೆಯುತ್ತಿರುವ ಆನ್‍ಲೈನ್ ಟ್ರೇಡಿಂಗ್ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಒಣದ್ರಾಕ್ಷಿಗೆ ಅವಶ್ಯಕತೆ ಇರುವ ಡಿಪ್ಪಿಂಗ್ ಆಯಿಲ್ ಮಹಾರಾಷ್ಟ್ರದಿಂದ ಆಮದು ಮಾಡಿಕೊಳ್ಳುವವರಿಗೆ ನೆರವಾಗಬೇಕು. ರೈತರು ಬೆಳೆದ ಬೆಳೆಯು ಆತನ ಮಗುವಿನಂತಿದ್ದು, ನಿಂಬೆ ಬೆಳೆಗಾರರಿಗೆ, ಹೂ ಮಾರಾಟಗಾರರಿಗೆ, ತರಕಾರಿ ಬೆಳೆಗಾರರಿಗೆ ಎಲ್ಲ ರೀತಿಯಿಂದ ನೆರವಾಗಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ಅವಶ್ಯಕ ವಸ್ತುಗಳನ್ನು ರೈತರು ನಾಶಪಡಿಸಿದೆ ಜಿಲ್ಲಾಡಳಿತದ ನೆರವು ಪಡೆಯಬೇಕು. ಆತ್ಮಹತ್ಯೆಗೆ ಶರಣಾಗದಂತೆಯೂ ಅವರು ಸಭೆ ಮೂಲಕ ಮನವಿ ಮಾಡಿದರು.

ರೈತರಿಗೆ ಶೋಷಣೆ ಮಾಡುವಂತಹ ಮಧ್ಯವರ್ತಿಗಳ ವಿರುದ್ಧ ಕಠಿಣಕ್ರಮ ಕೈಗೊಳ್ಳಬೇಕು. ದ್ರಾಕ್ಷಿ ಬೆಳೆ ಅನುಕೂಲಕ್ಕಾಗಿ ವಿಜಯಪುರ ಮತ್ತು ಬಾಗಲಕೋಟಗಳಲ್ಲಿ 2850 ಟನ್ ಸಂಗ್ರಹಕ್ಕೆ ಕೋಲ್ಡ್ ಸ್ಟೋರಜ್‍ಗಳು ಲಭ್ಯವಿದ್ದು, ಉಚಿತವಾಗಿ ಇವುಗಳ ಸೇವೆ ಸರ್ಕಾರದಿಂದ ಲಭ್ಯವಾಗಲಿದ್ದು ರೈತರು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದ ಅವರು ದ್ರಾಕ್ಷಿ ಬೆಳೆ ಅನುಕೂಲಕ್ಕಾಗಿ ವೈನರಿ ಉತ್ಪಾದನೆಗೂ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ತಿಳಿಸಿದರು.

ರೈತರಿಗೆ ಯಾವುದೇ ರೀತಿಯ ತೊಂದರೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಯಾರಾದರೂ ರೈತರಿಗೆ ತೊಂದರೆ ನೀಡುವಂತಹ ಪ್ರಕರಣ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಬೆಳಗಾವಿ ವಿಭಾಗದಲ್ಲಿ ಅಗ್ರಿಲೆಂಡಿಂಗ್ ಹೆಚ್ಚಿದ್ದು, ಇತ್ತೀಚೆಗೆ ಸಾಲ ವಿತರಣೆಯಲ್ಲಿ ನೂತನ ತಂತ್ರಾಂಶ ಅಳವಡಿಸಿದ್ದರಿಂದ ರೈತರು ರಿಯಾಯಿತಿ ಪಡೆಯುವಲ್ಲಿ ತೊಂದರೆಯಾಗುತ್ತಿದ್ದು ಈ ಕುರಿತು ಸಹಕಾರ ಸಚಿವರು ಮತ್ತು ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ತಿಳಿಸಿದರು.

ಕೊರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಪ್ರಶಂಸೆ: ಜಿಲ್ಲೆಯಾದ್ಯಂತ ಕೊರೋನಾ ಸೋಂಕಿತ ಒಂದೂ ಪ್ರಕರಣ ಆಗದಂತೆ ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಸಚಿವ ಬಿ.ಸಿ ಪಾಟೀಲ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರು ತೋಟಗಾರಿಕಾ ಬೆಳೆಗಳ ಹಾನಿ ಕುರಿತು ಮತ್ತು ಸೂಕ್ತ ಮಾರುಕಟ್ಟೆ ಒದಗಿಸಲು, ಶಾಸಕ ಶಿವಾನಂದ ಪಾಟೀಲ ಅವರು ಕೋಳಿ ಸಾಕಾಣಿಕೆದಾರರಿಗೆ ಸೂಕ್ತ ಅರಿವು ಮೂಡಿಸುವ ಮತ್ತು ಕೃಷಿ ಉತ್ಪಾದನಾ ಚಟುವಟಿಕೆಗಳಿಗೆ ನೀಡಲಾಗುವ ಸಾಲಕ್ಕೆ ಸಂಬಂಧಿಸಿದಂತೆ ರಿಯಾಯಿತಿ ಹಣ ರೈತರಿಗೆ ದೊರಕಿಸುವ ಬಗ್ಗೆ ಸಲಹೆ ನೀಡಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ರಾಜ್ಯದಲ್ಲಿ ಕೋವಿಡ್-19 ಅಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಲಾಗುತ್ತಿರುವ ವದಂತಿಗಳ ಬಗ್ಗೆ ತೀವ್ರ ನಿಗಾ ವಹಿಸುವ ವ್ಯವಸ್ಥೆ ಜಾರಿಗೊಳಿಸಲು, ತೋಟಗಾರಿಕಾ ಬೆಳೆಗಳಾದ ಒಣದ್ರಾಕ್ಷಿ ಬೆಳೆಗೆ ಇ-ಟ್ರೇಡಿಂಗ್‍ಗೆ ಅವಕಾಶ ಕಲ್ಪಿಸಬೇಕು. ಬಿಳಿಜೋಳ ಖರೀದಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.