ETV Bharat / state

ಬಿಜೆಪಿಯಲ್ಲಿ ಅನ್ಯಾಯವಾಗಿದ್ದಕ್ಕೆ ಕಾಂಗ್ರೆಸ್ ಬೆಂಬಲಿಸಿದ್ದಾರೆ: ಜಿ.ಪಂ. ಅಧ್ಯಕ್ಷೆ - ವಿಜಯಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷೀಯ ಚುನಾವಣೆ

ವಿಜಯಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷೀಯ ಚುನಾವಣೆಗೆ ಬಿಜೆಪಿ ಪಕ್ಷದಿಂದ ನಮ್ಮ ಪಕ್ಷಕ್ಕೆ ಬರಲು ಬಿಜೆಪಿ ಮಾಡಿದ ಅನ್ಯಾಯಗಳೇ ಕಾರಣ ಹೊರತು ನಾವು ಅವರನ್ನು ಕರೆತಂದಿಲ್ಲ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕಳ್ಳೀಮನಿ ಹೇಳಿದ್ದಾರೆ.

Z.P. President
ಜಿಲ್ಲಾ ಪಂಚಾಯತ್​​ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಪತ್ರಿಕಾ ಗೋಷ್ಠಿ
author img

By

Published : Jul 11, 2020, 7:54 PM IST

ವಿಜಯಪುರ: ಬಿಜೆಪಿಯಲ್ಲಿ ಯಾವುದೂ ಸರಿಯಿಲ್ಲ‌ ಎಂಬ ಕಾರಣಕ್ಕೆ ಸ್ವಯಂ ಪ್ರೇರಿತವಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೀಯ ಚುನಾವಣೆಯಲ್ಲಿ ಬಿಜೆಪಿಯ 4 ಸದಸ್ಯರು ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂದು ಜಿಲ್ಲಾ ಪಂಚಾಯತ್​​ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಹೇಳಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊರಟಗಿ ಕ್ಷೇತ್ರದ ಜಿಲ್ಲಾ ಪಂಚಾಯತ್​ ಸದಸ್ಯ ಬಿಂದುರಾಯಗೌಡ ಪಾಟೀಲ್​​ಗೆ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಲು ಬಿಜೆಪಿಯಲ್ಲಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು, ಇದರಿಂದಾಗಿ ಅವರಿಗೆ ಅನ್ಯಾಯವಾಗಿ ನಮ್ಮ ಪಕ್ಷಕ್ಕೆ ಬಂದಿದ್ದಾರೆ ಎಂದು ಬಿಂದುರಾಯಗೌಡ ಪಾಟೀಲ್​ ಮಾತನಾಡಿದ ವಿಡಿಯೋ ಬಿಡುಗಡೆ ಮಾಡಿದರು. ಇನ್ನು ಬಿಜೆಪಿಯಲ್ಲಿ ಸದಸ್ಯರಿಗೆ ಬೆಳೆಯಲು ಬಿಡುತ್ತಿಲ್ಲ ಎಂದು ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು.

ಜಿಲ್ಲಾ ಪಂಚಾಯತ್​​ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಪತ್ರಿಕಾ ಗೋಷ್ಠಿ

ಜಿಲ್ಲಾ ಪಂಚಾಯತ್​​ ಅಧ್ಯಕ್ಷರು ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸದಸ್ಯರಿಗೆ ಆಮಿಷವೂಡ್ಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಕ್ಕೆ ಉತ್ತರಿಸಿದ ಸುಜಾತಾ ಕಳ್ಳಿಮನಿ, ನಾವು ಯಾರಿಗೂ ಸಹ ಆಮಿಷ ಒಡ್ಡಿಲ್ಲ, ನಾವು ಯಾರನ್ನೂ ಸಹ ನಮ್ಮ ಪಕ್ಷಕ್ಕೆ ಕರೆ ತಂದಿಲ್ಲ ಎಂದರು.

ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಅನುಭವಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮೋಸ ಮಾಡಿ, ಬಿಜೆಪಿಗೆ ಪಕ್ಷಾಂತರಗೊಂಡ ನಮ್ಮ ಪಕ್ಷದ 3 ಸದಸ್ಯರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಇದೇ ವೇಳೆ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.