ವಿಜಯಪುರ: ಕಳೆದ ರಾತ್ರಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕಚೇರಿಯಲ್ಲಿ ಕಳ್ಳತನ ನಡೆದಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ.
ಯಾರೂ ಇಲ್ಲದ ಸಮಯದಲ್ಲಿ ಕಚೇರಿಯ ಬೀಗ ಮುರಿದ ಖದೀಮರು ಅಲ್ಲಿದ್ದ ಸುಮಾರು 1 ಲಕ್ಷದ 25 ಸಾವಿರ ನಗದು ಹಾಗೂ 10 ಗ್ರಾಂ ಚಿನ್ನಾಭರಣ ಸೇರಿದಂತೆ ಇತರೆ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.