ವಿಜಯಪುರ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.
ವಿಜಯಪುರದ ಆಶ್ರಮ ರಸ್ತೆಯ ರಾಜು ಪಾನ್ ಶಾಪ್ನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಜಿಲ್ಲಾ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸೋಮನಾಥ ಹಿರೋಳ್ಳಿ, ಹಮೀದ್ ಜಾಹಾಗಿರದಾರ್, ಶರಣಪ್ಪ ಖಾನಾಪುರ ಬಂಧಿತ ಆರೋಪಿಗಳು. ಬಂಧಿತರಿಂದ ಎರಡು ಮೊಬೈಲ್ ಮತ್ತು 39, 300 ನಗದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.