ಮುದ್ದೇಬಿಹಾಳ (ವಿಜಯಪುರ): ಪಟ್ಟಣದ ಹುಡ್ಕೋದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಹುಡ್ಕೋದ ಮೂರು ಕ್ರಾಸ್‌ಗಳ ವ್ಯಾಪ್ತಿಯಲ್ಲಿ ಸೀಲ್‌ಡೌನ್ ಮಾಡಲಾಗಿದೆ.
ಆರೋಗ್ಯ ಇಲಾಖೆ ಸಿಬ್ಬಂದಿ ಸೀಲ್‌ಡೌನ್ ಪ್ರದೇಶದ ಪ್ರತಿ ಮನೆಗೂ ಭೇಟಿ ನೀಡಿ ಕೋವಿಡ್ ಸಮೀಕ್ಷೆ ಕಾರ್ಯವನ್ನು ಮಾಡುತ್ತಿದ್ದಾರೆ. ಇದಲ್ಲದೇ ಕೋವಿಡ್ ಕುರಿತು ಜನರಿಗೆ ಮಾಹಿತಿ ನೀಡಲಾಯಿತು. ಪುರಸಭೆಯಿಂದ ಹೈಪೊಕ್ಲೋರಾಯಿಡ್ ರಾಸಾಯನಿಕ ದ್ರಾವಣವನ್ನು ನೀರಿನಲ್ಲಿ ಮಿಶ್ರಣ ಮಾಡಿ ಸಿಂಪಡಣೆ ಮಾಡುವ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು.
ತಹಸೀಲ್ದಾರ್ ಜಿ.ಎಸ್.ಮಳಗಿ, ಡಾ.ಸತೀಶ ತಿವಾರಿ, ಸಿಪಿಐ ಆನಂದ ವಾಘಮೋಡೆ, ಪುರಸಭೆ ಮುಖ್ಯಾಧಿಕಾರಿ ಗೋಪಾಲಕಾಸೆ ಸೀಲ್ ಡೌನ್ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.