ವಿಜಯಪುರ: ಜಿಲ್ಲೆಯಲ್ಲಿ 10 ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಒಂದೇ ದಿನ ಒಂದೇ ಕುಟುಂಬದ ಮೂವರಿಗೆ ಸೋಂಕು ತಗುಲಿದೆ.
ಏ. 12ರವರೆಗೆ 6 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದವು. ಏ. 12ರಂದು ಕೊರೊನಾ ಶಂಕಿತ ವ್ಯಕ್ತಿ ಮೃತಪಟ್ಟಿದ್ದ. ಏ. 13ರಂದು ಮೃತ ವ್ಯಕ್ತಿಯ ಗಂಟಲು ದ್ರವ ಮಾದರಿ ಪಾಸಿಟಿವ್ ಬಂದಿತ್ತು. ಇಂದು ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಕೊರೊನಾ ಪಾಸಿಟಿವ್ ವರದಿ ಬಂದಿದ್ದ 60 ವರ್ಷದ ಮಹಿಳೆಯ ಸಂಪರ್ಕದಿಂದ ಈ ಮೂವರಿಗೆ ಪಾಸಿಟಿವ್ ದೃಢವಾಗಿದೆ. 33 ವರ್ಷದ ಮಹಿಳೆ, 28 ವರ್ಷದ ಮಹಿಳೆ ಹಾಗೂ 26 ವರ್ಷದ ಪುರುಷನಿಗೆ ಸೋಂಕು ತಗುಲಿದೆ.