ವಿಜಯಪುರ: ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಜಿಲ್ಲೆಯಲ್ಲಿ ನಡೆದಿದೆ. ಲಾರಿ ಹಾಗೂ ಆಂಬ್ಯುಲೆನ್ಸ್ ಮಧ್ಯೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಿಂದಗಿ ತಾಲೂಕಿನ ರಾಜ್ಯ ಹೆದ್ದಾರಿಯಲ್ಲಿನ ಯರಗಲ್ ಕ್ರಾಸ್ ಬಳಿ ಘಟನೆ ನಡೆಯಿತು. ಮೃತ ವ್ಯಕ್ತಿಯನ್ನು ಅಂತರಗಂಗಿ ಗ್ರಾಮದ ಚನ್ನು ಗಾಣಿಗೇರ (27) ಎಂದು ಗುರುತಿಸಲಾಗಿದೆ.
ಆಂಬ್ಯುಲೆನ್ಸ್ನಲ್ಲಿದ್ದ ನಾಲ್ವರ ಪೈಕಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಮುಂಭಾಗ ನಜ್ಜುಗುಜ್ಜಾಗಿದೆ.
ರೋಗಿ ಸಾವು: ಸಿಂದಗಿಯಿಂದ ಹಂಚಿನಾಳ ಗ್ರಾಮಕ್ಕೆ ರೋಗಿಯನ್ನು ಕರೆತರಲು ಹೊರಟ ವಾಹನ ಅಪಘಾತಕ್ಕೀಡಾಗಿದೆ. ಸಿಂದಗಿಯಿಂದ ಕಲಬುರಗಿಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಮೃತನ ಹೆಸರು ತಿಳಿದುಬಂದಿಲ್ಲ. ಸ್ಥಳಕ್ಕೆ ಸಿಂದಗಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಕಿ ಸಾವು: ಲಾರಿ ಡಿಕ್ಕಿಯಾಗಿ ಶಿಕ್ಷಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸವಿತಾ ನಾಗಪ್ಪ ಸಗಾಯಿ (30) ಮೃತ ಶಿಕ್ಷಕಿ. ಇಂಡಿ ತಾಲೂಕಿನ ಝಳಕಿಯ ಗುರುಚಂದ್ರ ಶೇಖರ ವಿಶೇಷಚೇತನ ಮಕ್ಕಳ ಶಾಲೆಯ ಶಿಕ್ಷಕಿಯಾಗಿದ್ದರು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ ಆರ್ಟಿಒ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ. ಝಳಕಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Chikkamagaluru accident: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ.. ಇಬ್ಬರು ಸ್ಥಳದಲ್ಲೇ ಸಾವು
ಚಿಕ್ಕಮಗಳೂರು ಅಪಘಾತ ಪ್ರಕರಣ: ಚಿಕ್ಕಮಗಳೂರು ಜಿಲ್ಲೆಯ ಕಡೂರಲ್ಲಿ ಬೈಕ್ ಮತ್ತು ಕಾರಿನ ಮಧ್ಯೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಹೊಸದುರ್ಗ ತಾಲೂಕಿನ ಅಗಲಕೆರೆ ಗ್ರಾಮದ ಲೋಹಿತ್ (35), ನಾಗರಾಜ್ (40) ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಬೈಕ್ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಹೊತ್ತಿ ಉರಿದಿತ್ತು.
ರಾಜ್ಯದಲ್ಲಿ ಶುಕ್ರವಾರ ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಐವರು ಸಾವನ್ನಪ್ಪಿದ್ದರು. ಬೆಂಗಳೂರು-ತಮಿಳುನಾಡಿನ ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಕೈಗಾರಿಕಾ ಪ್ರದೇಶದ ಬಳಿ ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನು ಮಂಡ್ಯ ತಾಲೂಕಿನ ಹೊಳಲು ಗ್ರಾಮದ ಬಳಿ ಟ್ರ್ಯಾಕ್ಟರ್, ಬೈಕ್ ಡಿಕ್ಕಿಯಾಗಿ ಓರ್ವ ಮೃತಪಟ್ಟಿದ್ದರು. ಹಾಗೆಯೇ ಬೀದರ್ ಜಿಲ್ಲೆಯಲ್ಲಿ ಟಿಪ್ಪರ್, ಬೈಕ್ ಮಧ್ಯೆ ಭೀಕರ ರಸ್ತೆ ಅಫಘಾತ ಸಂಭವಿಸಿ, ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ಇನ್ನು ಹಾಸನದ ಭುವನಹಳ್ಳಿಯಲ್ಲಿ ಟ್ಯಾಂಕರ್ ಲಾರಿ ಮಗುಚಿ ಬಿದ್ದು ಡ್ರೈನೇಜ್ ಕೆಲಸ ಮಾಡುವ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದರು.
ಬೆಂಗಳೂರು-ಮೈಸೂರು ಹೈವೇಯಲ್ಲಿ ಪಕ್ಕದ ರಸ್ತೆಗೆ ಜಿಗಿದ ಬೃಹತ್ ಕಂಟೇನರ್ ಲಾರಿ! ಭಯಾನಕ ದೃಶ್ಯ