ವಿಜಯಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಆಕಸ್ಮಿಕ ಬೆಂಕಿ ತಗುಲಿ ಅಂಗಡಿಗಳು ಹೊತ್ತಿ ಉರಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.
ನಗರದ ಜನತಾ ಬಜಾರ್ನಲ್ಲಿ ಘಟನೆ ನಡೆದಿದ್ದು, ವಿದ್ಯುತ್ ಅವಘಡದಿಂದ ಅಂಗಡಿಗಳು ಬೆಂಕಿ ಹೊತ್ತಿ ಉರಿದಿವೆ. ಎರಡು ಕಿರಾಣಿ ಸ್ಟೋರ್, ಒಂದು ಈರುಳ್ಳಿ ಗೋದಾಮಿಗೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣ ಕಿರಾಣಿ ದಿನಸಿ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳ ಸಿಬ್ಬಂದಿಗೆ ಸಾರ್ವಜನಿಕರು ಕೂಡ ಬೆಂಕಿ ನಂದಿಸುವ ಕಾರ್ಯಕ್ಕೆ ಸಾಥ್ ನೀಡಿದ್ದು, ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.