ವಿಜಯಪುರ : ಜಿಲ್ಲೆಯ ಸಿಂದಗಿ ವಿಧಾನಸಭೆ ಉಪಚುನಾವಣೆಗೆ ಸಂಬಂಧಪಟ್ಟಂತೆ ಚುನಾವಣಾ ಕಾರ್ಯಕ್ಕೆ ನೇಮಿಸಿದ ಮೂವರು ಅಧಿಕಾರಿಗಳು ಕರ್ತವ್ಯ ಲೋಪವೆಸಗಿದ ಹಿನ್ನೆಲೆ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಪಿ.ಸುನಿಲ್‌ಕುಮಾರ್ ಆದೇಶ ಹೊರಡಿಸಿದ್ದಾರೆ.
ಸಿಂದಗಿಯ ವಿದ್ಯಾನಗರದ ಪ್ರಾಥಮಿಕ ಶಾಲೆಯ ಶಿಕ್ಷಕರಾದ ವಿ ವಿ ನಿಂಬರ್ಗಿ, ಎಸ್ ಆರ್ ಸಿಂದಗಿ ಹಾಗೂ ಆರ್ ಎ ಕಠಾರೆ ಇವರನ್ನು ಅಮಾನತುಗೊಳಿಸಲಾಗಿದೆ. ಇವರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಅಮಾನತುಗೊಂಡ ನೌಕರರು ಈ ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶವಿದ್ದರೂ ಈ ನಿಯಮ ಉಲ್ಲಂಘಿಸಿದ್ದರು. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ನೌಕರರನ್ನು ಕರ್ತವ್ಯದಿಂದ ಇಂದೇ ಬಿಡುಗಡೆ ಮಾಡಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.