ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು 185 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಆಗಿದ್ದು, ಹೊಸದಾಗಿ 114 ಕೊರೊನಾ ಪ್ರಕರಣ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12,758 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 11,757 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಬಾಗಲಕೋಟೆ ತಾಲೂಕಿನಲ್ಲಿ 69, ಬಾದಾಮಿ 7, ಬೀಳಗಿ 5, ಹುನಗುಂದ 5, ಮುಧೋಳ 13, ಜಮಖಂಡಿ 15 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1303 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಈವರೆಗೆ ಒಟ್ಟು 1,41,187 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 12,6615 ನೆಗಟಿವ್ ಪ್ರಕರಣ ಹಾಗೂ 128 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 873 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ.
ವಿಜಯಪುರ:
ಜಿಲ್ಲೆಯಲ್ಲಿ ಇಂದು 38 ಹೊಸ ಪಾಸಿಟಿವ್ ಕೇಸ್ ದೃಢವಾಗಿದ್ದು, ಇಲ್ಲಿವರೆಗೆ 11,799 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 75 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆ ಯಿಂದ
ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 11,161 ಕ್ಕೆ ಏರಿಕೆಯಾಗಿದೆ.
ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ 188 ಕ್ಕೆ ಏರಿಕೆಯಾಗಿದೆ. ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 450 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,31,752 ಜನರ ಮೇಲೆ ನಿಗಾ ಇಡಲಾಗಿದೆ. 1,30,990 ಜನರ ಸ್ಯಾಂಪಲ್ ಪಡೆಯಲಾಗಿದೆ.
ಇವರಲ್ಲಿ 1,15,114 ಜನರ ವರದಿ ನೆಗಟಿವ್ ಆಗಿದ್ದು, 11,799 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 4,081 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.