ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ರಣಕೇಕೆ ಹಾಕಿದೆ. ಇಂದು ಐವರಲ್ಲಿ ಸೋಂಕು ದೃಢಪಟ್ಟಿದ್ದು, ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 75ಕ್ಕೆ ಏರಿದೆ.
ಮಹಾರಾಷ್ಟ್ರದಿಂದ ಬಂದಿದ್ದ 5 ಜನರಲ್ಲಿ ಸೋಂಕು ದೃಢಪಟ್ಟಿದೆ. 18 ವರ್ಷದ ಪುರುಷ ಪಿ- 2203, 34 ವರ್ಷದ ಪುರುಷ ಪಿ-2204, 30 ವರ್ಷದ ಪುರುಷ ಪಿ- 2205, 60 ವರ್ಷದ ವೃದ್ಧ ಪಿ- 2206 ಹಾಗೂ ಪಿ- 2207, 17ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ.
ಈ ಐವರಿಗೆ ಜಿಲ್ಲಾಸ್ಪತ್ರೆಯ ಕೋವಿಡ್ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು ಇತ್ತೀಚಿಗೆ ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಆಗಮಿಸಿದಾಗ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಇವರ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಇವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 75ಕ್ಕೆ ಏರಿದೆ.