ವಿಜಯಪುರ: ಇಂದು ಸಹ ಒಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 70ಕ್ಕೆ ಏರಿದೆ.
ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಬಂದ 28 ವರ್ಷದ ಪಿ-2136 ಯುವತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈಕೆ ಇತ್ತೀಚೆಗೆ ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಬಂದಿದ್ದಳು.
ಈಕೆಯನ್ನು ಜಿಲ್ಲಾಡಳಿತದಿಂದ ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಗಂಟಲು ದ್ರವದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿ ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 70ಕ್ಕೆ ಏರಿದೆ.