ವಿಜಯಪುರ: ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಡಚಣ ತಾಲ್ಲೂಕಿನ ಉಮರಾಜ ಹಾಗೂ ಭಂಡರಕವಟೆ ಬ್ಯಾರೇಜ್ ಬಳಿ ನಡೆದಿದೆ.
ಭಂಡರಕವಟೆಯಿಂದ ಉಮರಾಜ ಕಡೆ ಹೊರಟಿದ್ದ ಟ್ರಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕನ ತಲೆಗೆ ಪೆಟ್ಟಾಗಿದ್ದು, ಎರಡೂ ಕೈಗಳು ಮುರಿದಿವೆ. ಬಳಿಕ ಚಿಕಿತ್ಸೆಗೆಂದು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬ್ಯಾರೇಜ್ಗೆ ತಡೆಗೋಡೆ ಇಲ್ಲದಿರುವುದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸದ್ಯ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.