ವಿಜಯಪುರ: ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಆಟೋ ಮೇಲೆ ಉರುಳಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಆಟೋ ಚಾಲಕ ಸೇರಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಟೋದಲ್ಲಿ ಆರು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ನಗರದ ಪೊಲೀಸ್ ಗ್ರೌಂಡ್ ಬಳಿ ಈ ದುರ್ಘಟನೆ ಸಂಭವಿಸಿದೆ. ಪೊಲೀಸ್ ತರಬೇತಿ ಕೇಂದ್ರದ ಆವರಣದಲ್ಲಿದ್ದ ಮರ ಆಟೋ ಮೇಲೆ ಬಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಪ್ರಧಾನಿಗೆ ನೇತಾಜಿ ಪ್ರತಿಮೆ ಉಡುಗೊರೆ ಕೊಟ್ಟ ಮೈಸೂರಿನ ಅರುಣ್: ಇಂಡಿಯಾ ಗೇಟ್ ಬಳಿ ಬೋಸ್ ವಿಗ್ರಹ ನಿರ್ಮಿಸುವ ಹೊಣೆ