ವಿಜಯಪುರ: ಕಾಲುವೆ ಪಕ್ಕದ ಜಮೀನಿನಲ್ಲಿ ನೀರು ಹಾಯಿಸಲು ಹೋಗಿದ್ದ ಸಹೋದರರಿಬ್ಬರು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಹಳ್ಳದ ಗೆಣ್ಣೂರ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.
ಸುನೀಲ ಕಲ್ಲಪ್ಪ ಮಾದರ್ (20) ಹಾಗೂ ಅನಿಲ ಕಲ್ಲಪ್ಪ ಮಾದರ (16) ಎಂಬುವವರೇ ನೀರು ಪಾಲಾದ ಸಹೋದರರು ಎಂದು ತಿಳಿದುಬಂದಿದೆ. ಬೆಳಗ್ಗೆ ಜಮೀನಿಗೆ ನೀರು ಹಾಯಿಸಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸರ್ಕಾರಿ ಭೂಮಿ ಕಬಳಿಕೆ ಆರೋಪ: ಹೊಸಪೇಟೆ ನಗರಸಭೆ ಮಾಜಿ ಸದಸ್ಯ ಅರೆಸ್ಟ್