ವಿಜಯಪುರ: ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದು ಕ್ವಾರಂಟೈನ್ನಲ್ಲಿದ್ದ ಇಬ್ಬರು ಯುವಕರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.
ರೋಗಿ ನಂ: 2420 ( 32) ವರ್ಷದ ಯುವಕ ಹಾಗೂ ರೋಗಿ ನಂ: 2421 (23) ವರ್ಷದ ಯುವಕನಿಗೆ ಸೋಂಕು ತಗುಲಿದೆ. ಇಬ್ಬರು ಯುವಕರು ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಆಗಮಿಸಿದ್ದರು. ಇವರನ್ನು ಜಿಲ್ಲಾಡಳಿತ ಹೋಂ ಕ್ವಾರಂಟೈನ್ಲ್ಲಿಟ್ಟಿತ್ತು. ನಂತರ ಇಬ್ಬರ ಗಂಟಲು ದ್ರವವನ್ನು ಬೆಂಗಳೂರಿಗೆ ಕಳುಹಿಸಿತ್ತು.
ಇಂದು ವರದಿ ಬಂದಿದ್ದು, ಇಬ್ಬರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.