ETV Bharat / state

ವಿಜಯಪುರದಲ್ಲಿ ಮತ್ತಿಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​​​

ವಿಜಯಪುರದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಇಂದು ಮತ್ತಿಬ್ಬರು ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು ಕೋವಿಡ್​​​ ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 70 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ 44 ಜನರು ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

Two more Coronavirus infections recovered in Vijayapura: discharge from hospital
ವಿಜಯಪುರದಲ್ಲಿ ಮತ್ತಿಬ್ಬರು ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​​​
author img

By

Published : May 25, 2020, 10:12 PM IST

ವಿಜಯಪುರ: ಕೊರೊನಾ ಸೋಂಕಿನಿಂದ ಗುಣಮುಖರಾದ ಇಬ್ಬರು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಈವರೆಗೆ ಒಟ್ಟು 44 ರೋಗಿಗಳು ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ರೋಗಿ ಸಂಖ್ಯೆ 594(22 ವರ್ಷದ ಯುವಕ) ಹಾಗೂ ರೋಗಿ ಸಂಖ್ಯೆ 856(20 ವರ್ಷದ ಯುವತಿ) ಗುಣಮುಖರಾಗಿ, ಬಿಡುಗಡೆ ಹೊಂದಿದ್ದು, ಅದರಂತೆ ಸದ್ಯ ಆಸ್ಪತ್ರೆಯಲ್ಲಿ 22 ಸಕ್ರೀಯ ಕೋವಿಡ್-19 ರೋಗಿಗಳಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 70 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ 44 ಜನರು ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನುಳಿದ 22 ಮಂದಿ ಸೋಂಕಿತರಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 14,954 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 1,866 ಜನರು 28 ದಿನಗಳ ಐಸೋಲೇಷನ್ ಅವಧಿ ಪೂರ್ಣಗೊಳಿಸಿದ್ದಾರೆ. ಅಲ್ಲದೇ 13,042 ಜನರು (1 ರಿಂದ 28ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದು, ಈವರೆಗೆ 12,466 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 4,263 ಜನರ ವರದಿ ನೆಗೆಟಿವ್​​​​ ಬಂದಿದೆ. ಇನ್ನೂ 8,133 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.