ವಿಜಯಪುರ: ಪ್ಲಾಸ್ಟಿಕ್ ಅಂಗಡಿಗಳಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಸಜೀವ ದಹನವಾಗಿದ್ದಾರೆ. ನಿಡಗುಂದಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಬಸವನ ಬಾಗೇವಾಡಿ ಕ್ರಾಸ್ ಬಳಿ ತಡರಾತ್ರಿ ಈ ಘಟನೆ ನಡೆದಿದೆ.
ಅಶೋಕ ದೇಸ್ನೂಯಿ (25) ಹಾಗೂ ಲಿಂಬಾರಾಮ ದೇಸ್ನೂಯಿ (35) ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ದುರ್ದೈವಿಗಳು. ಹೆದ್ದಾರಿ ಪಕ್ಕದಲ್ಲಿದ್ದ ಎರಡು ಪ್ಲಾಸ್ಟಿಕ್ ಅಂಗಡಿಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಂಗಡಿಯಲ್ಲಿ ಮಲಗಿದ್ದ ಇಬ್ಬರು ಸುಟ್ಟು ಭಸ್ಮವಾಗಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರೊಳಗಾಗಿ ಇಬ್ಬರು ಸಜೀವ ದಹನವಾಗಿದ್ದರು. ಸಾಲು ಸಾಲಾಗಿದ್ದ ಏಳೆಂಟು ಪ್ಲಾಸ್ಟಿಕ್ ಅಂಗಡಿಗಳನ್ನು ಬೆಂಕಿಗಾಹುತಿಯಾಗುವುದನ್ನು ಅಗ್ನಿಶಾಮಕ ದಳ ಸಿಬ್ಬಂದಿ ತಪ್ಪಿಸಿದ್ದಾರೆ. ಸ್ಥಳಕ್ಕೆ ನಿಡಗುಂದಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಅಧ್ಯಕ್ಷ ಕ್ಸಿ ಜಿನ್ಪಿಂಗ್ ಕಠಿಣ ನೀತಿಗಳೇ ಚೀನಾದ ಆರ್ಥಿಕತೆಗೆ ಅಪಾಯ ತಂದೊಡ್ಡಲಿವೆ: ವರದಿ