ವಿಜಯನಗರ: ರಸ್ತೆ ತಿರುವಿನಲ್ಲಿ ಬೈಕ್ ಸಮೇತ ಗುಂಡಿಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಆನೆಕಲ್ ತಾಂಡಾದ ಹೊರವಲಯದಲ್ಲಿ ನಡೆದಿದೆ.
ಬೈಕ್ ಸವಾರ ಸುನಿಲ್ ನಾಯ್ಕ್ (21), ಪೂಜಾ (14) ಮೃತ ದುರ್ದೈವಿಗಳು. ಮೃತರು ಹಗರಿಬೊಮ್ಮನಹಳ್ಳಿ ತಾಲೂಕಿನ ಬಸರಕೋಡು ಗ್ರಾಮದ ನಿವಾಸಿಗಳು ಎನ್ನಲಾಗಿದೆ.
ಆಕಾಶ ನಾಯ್ಕ ಎಂಬಾತನಿಗೆ ಗಾಯಗಳಾಗಿದ್ದು, ಆತನನ್ನು ಕೊಪ್ಪಳದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಜಯನಗರ ಎಸ್‌ಪಿ ಶ್ರೀಹರಿಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.