ETV Bharat / state

ವಿಜಯಪುರದಲ್ಲಿ ಡ್ರಗ್​ ನಿಯಂತ್ರಣಕ್ಕೆ ಎರಡು ತಂಡ ರಚನೆ: ಎಸ್​​​ಪಿ ಅನುಪಮ್​ ಅಗರ್ವಾಲ್​ - Selling marijuana

ವಿಜಯಪುರ ಜಿಲ್ಲೆಯಲ್ಲಿ ಯಾರೆಲ್ಲ ಈ ಜಾಲದಲ್ಲಿ ಶಾಮೀಲಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಒಂದು ವಾರದಿಂದ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 200ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ 70ಕ್ಕೂ ಹೆಚ್ಚು ಪ್ರಕರಣ ದಾಖಲಿಸಿಕೊಂಡಿದ್ದು, 60ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಎಸ್​​​ಪಿ ಅನುಪಮ್​ ಅಗರ್ವಾಲ್​ ತಿಳಿಸಿದ್ದಾರೆ.

two-team-formation-for-drug-control-in-district-sp-anupam-agrawal
ವಿಜಯಪುರದಲ್ಲಿ ಡ್ರಗ್​ ನಿಯಂತ್ರಣಕ್ಕೆ ಎರಡು ತಂಡ ರಚನೆ: ಎಸ್​​​ಪಿ ಅನುಪಮ್​ ಅಗ್ರವಾಲ್​​​​
author img

By

Published : Sep 8, 2020, 7:46 PM IST

ವಿಜಯಪುರ: ಜಿಲ್ಲೆಯಲ್ಲಿ ಡ್ರಗ್ಸ್ ಜಾಲ ಪತ್ತೆಗೆ ತಂಡಗಳ ರಚನೆ ಮಾಡಲಾಗಿದೆ ಎಂದು ಎಸ್​​ಪಿ ಅನುಪಮ್​ ಅಗರ್ವಾಲ್​ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಪತ್ತೆಗೆ 2 ತಂಡ ರಚಿಸಲಾಗಿದೆ. ಈ ಹಿಂದೆ ಡ್ರಗ್ಸ್ ಮಾರಾಟ ಸಂಬಂಧ ಬಂಧಿಸಿರುವ ಆರೋಪಿಗಳ ವಿಚಾರಣೆ ಸಹ ನಡೆಯುತ್ತಿದೆ ಎಂದರು.

ಒಂದು ವಾರದಲ್ಲಿ 4 ಗಾಂಜಾ ಮಾರಾಟ ಪ್ರಕರಣ ದಾಖಲಾಗಿವೆ. ನಿಡಗುಂದಿಯಲ್ಲಿ 60 ಕೆ.ಜಿ ಗಾಂಜಾ ಗಿಡ ಜಪ್ತಿಯಾಗಿ ಓರ್ವನ ಬಂಧನವಾದರೆ. ವಿಜಯಪುರ ನಗರದ ಜಮಖಂಡಿ ನಾಕಾ ಬಳಿ 5 ಕೆ.ಜಿ ಗಾಂಜಾ ಗಿಡ ವಶಪಡಿಸಿಕೊಂಡು ಓರ್ವನನ್ನು ಬಂಧಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್​​ ವರಿಷ್ಠಾಧಿಕಾರಿ ಅನುಪಮ್​ ಅಗರ್ವಾಲ್​

ವಿಜಯಪುರ ಜಿಲ್ಲೆಯಲ್ಲಿ ಯಾರೆಲ್ಲ ಈ ಜಾಲದಲ್ಲಿ ಶಾಮೀಲಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಒಂದು ವಾರದಿಂದ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 200ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ 70ಕ್ಕೂ ಹೆಚ್ಚು ಪ್ರಕರಣ ದಾಖಲಿಸಿಕೊಂಡಿದ್ದು, 60ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಎಸ್​​​ಪಿ ಅಗರ್ವಾಲ್​ ಹೇಳಿದರು.

ನಾಗಠಾಣ ಶಾಸಕ ದೇವಾನಂದ ಚವ್ಹಾಣ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದಲ್ಲಿ ತಂಬಾಕು, ಗಾಂಜಾ ಮಿಶ್ರಿತ ಮಾವಾ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತನಿಖೆ ನಡೆಸಲಾಗುವುದು. ಈ ಸಂಬಂಧ ಅಧಿಕಾರಿಗಳಿಗೆ ಎಚ್ಚರ ವಹಿಸಿ ಗಡಿಭಾಗದಲ್ಲಿ ಮಾದಕ ದ್ರವ್ಯ ಮಾರಾಟ ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.