ವಿಜಯಪುರ: ನಗರದ ಸ್ಟೇಷನ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಅನಾರೋಗ್ಯದಿಂದ ಸಾವಿಗೀಡಾದ ಶಂಕೆ ವ್ಯಕ್ತವಾಗಿದೆ.
ಸುಮಾರು 60 ವರ್ಷ ವಯಸ್ಸಿನ ಪುರುಷನ ಶವ ಪತ್ತೆಯಾಗಿದ್ದು, ಮೃತನ ಬಗ್ಗೆ ಸರಿಯಾದ ಮಾಹಿತಿ ಲಭ್ಯವಾಗಿಲ್ಲ. ಗೊಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.