ETV Bharat / state

ಭೀಮಾತೀರದ ಭೈರಗೊಂಡ ಮೇಲೆ ದಾಳಿ: ಆಸ್ಪತ್ರೆಗೆ ಭೇಟಿ ನೀಡಿದ ಎಸ್​ಪಿ - ವಿಜಯಪುರ ಲೇಟೆಸ್ಟ್ ಅಪರಾಧ ಸುದ್ದಿ

ಭೈರಗೊಂಡ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ವಿಚಾರಣೆ ನಡೆಸಿದ್ದಾರೆ.

sp anupam agarwal
ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್
author img

By

Published : Nov 2, 2020, 7:57 PM IST

ವಿಜಯಪುರ: ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ವಿಚಾರಣೆ ನಡೆಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್

ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸಾಹುಕಾರ ಆರೋಗ್ಯ ಸ್ಥಿತಿ ವಿಚಾರಿಸಿದ ಎಸ್ಪಿ ಅನುಪಮ್ ಅಗರವಾಲ್ ಬಳಿಕ ಮಾತನಾಡಿ '' ಮಧ್ಯಾಹ್ನ ಘಟನೆ ನಡೆದಿದ್ದು, ಮಹಾದೇವ ಸಾಹುಕಾರ ಮತ್ತು ಆತನ ಬೆಂಬಲಿಗರ ಮೇಲೆ ಮೊದಲು ಕಲ್ಲು ತೂರಾಟ ನಡೆಸಿದೆ. ಬಳಿಕ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಇತನ ಸಂಬಂಧಿ ಬಾಬುರಾವ್ ಹಂಚಿನಾಳ(64) ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮಹಾದೇವ ಸಾಹುಕಾರ್‌ ಬೈರಗೊಂಡಗೆ 3 ಗುಂಡು ತಗುಲಿದೆ'' ಎಂದು ಸ್ಪಷ್ಟನೆ ನೀಡಿದರು.

ಮಹಾದೇವ ಸಾಹುಕಾರ ಭೈರಗೊಂಡ ಕಾರು ಚಾಲಕನಿಗೆ ಗಾಯವಾಗಿದ್ದು, ಹಳೆಯ ವೈಷಮ್ಯದ ಹಿನ್ನೆಲೆ 15 ಮಂದಿ ಸೇರಿಕೊಂಡು ಕೃತ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದ್ದು, ಆರೋಪಿಗಳನ್ನು ಪತ್ತೆ ಮಾಡುವುದಾಗಿ ಎಸ್ಪಿ ಅನುಪಮ್ ಅಗವಾಲ್ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.