ETV Bharat / state

ವಿಜಯಪುರದಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ಸ್ಥಗಿತ

ಮಹಾರಾಷ್ಟ್ರಕ್ಕೆ ತೆರಳುವ ಕರ್ನಾಟಕದ ಬಸ್​ಗಳಿಗೆ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಹಾನಿ ಉಂಟು ಮಾಡುತ್ತಿರುವ ಹಿನ್ನೆಲೆ ವಿಜಯಪುರ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಸರ್ಕಾರಿ ಬಸ್​ಗಳನ್ನು ಸ್ಥಗಿತಗೊಳಿಸಲಾಗಿದೆ.

bus
ಸಾರಿಗೆ ಬಸ್ ಸಂಚಾರ ಸ್ಥಗಿತ
author img

By

Published : Dec 23, 2021, 12:00 PM IST

ವಿಜಯಪುರ: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜ ಸುಟ್ಟು, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ ಹಿನ್ನೆಲೆ ಎರಡು ರಾಜ್ಯಗಳಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​ಗಳಿಗೆ ಎಂಇಎಸ್ ಕಾರ್ಯಕರ್ತರು ಹಾನಿ ಮಾಡುತ್ತಿರುವ ಹಿನ್ನೆಲೆ ಆ ರಾಜ್ಯಕ್ಕೆ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ಮಹಾರಾಷ್ಟ್ರಕ್ಕೆ ಹೊರಡುತ್ತಿದ್ದ ಎಲ್ಲಾ ಬಸ್​ ಸಂಚಾರ ಬಂದ್​ ಮಾಡಲಾಗಿದೆ.

ಓದಿ: ಮುಂದುವರೆದ ಎಂಇಎಸ್-ಶಿವಸೇನೆ ಉದ್ಧಟತನ : ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ಸ್ಥಗಿತ

ವಿಜಯಪುರದಿಂದ ಪ್ರತಿ ನಿತ್ಯ 111 ಸರ್ಕಾರಿ ಬಸ್​ಗಳು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದವು. ಇದೀಗ ಎಲ್ಲಾ ಬಸ್​ಗಳ ಸಂಚಾರ ಬಂದ್ ಮಾಡಲಾಗಿದ್ದು, ಪರಿಸ್ಥಿತಿ ತಿಳಿಗೊಳ್ಳುವವರೆಗೂ ಆರಂಭಿಸುವುದಿಲ್ಲ. ಕರ್ನಾಟಕ ಗಡಿಭಾಗದವರೆಗೆ ಮಾತ್ರ ಸಾರಿಗೆ ಬಸ್​ಗಳು ಸಂಚಾರ ನಡೆಸಲಿದ್ದು, ಅಲ್ಲಿಂದ ವಾಪಸ್ ವಿಜಯಪುರಕ್ಕೆ ತೆರಳಲಿವೆ ಎಂದು ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.