ವಿಜಯಪುರ: ಓಮಿನಿ ವ್ಯಾನ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್ನಲ್ಲಿದ್ದ ಅಜ್ಜಿ ಹಾಗೂ ಮೊಮ್ಮೊಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ.
ಚಾಂದಬೀ ಅಂಗಡಿ (45) ಮಹೀರಾಬಾನು ದೊಡ್ಡಮನಿ (3) ಅಪಘಾತದಲ್ಲಿ ಮೃತಪಟ್ಟ ಅಜ್ಜಿ ಮತ್ತು ಮೊಮ್ಮಗಳು.
ಓಮಿನಿ ವ್ಯಾನ್ಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್ ಕೊಲ್ಹಾರ ಪಟ್ಟಣದ ಯುಕೆಪಿ ವೃತ್ತದ ಅಂಡರ್ ಪಾಸ್ ಕಾಮಗಾರಿಯ ಗುಂಡಿಗೆ ಬಿದ್ದು, ವ್ಯಾನ್ ನಲ್ಲಿದ್ದ ಅಜ್ಜಿ ಹಾಗೂ ಮೊಮ್ಮಗಳು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಗೆ ಅಂಡರ್ ಪಾಸ್ ಅವೈಜ್ಞಾನಿಕ ಕಾಮಗಾರಿಯೇ ಕಾರಣವೆಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕೊಲ್ಹಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.