ETV Bharat / state

ಫೆಬ್ರವರಿ ತಿಂಗಳಲ್ಲಿ ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ: ಸಚಿವ ಗೋವಿಂದ ಕಾರಜೋಳ - ಇಂಡಿಯಾ ವಿಮಾನ ಪ್ರಾಧಿಕಾರ

ವಿಜಯಪುರ ಏರ್​ಪೋರ್ಟ್​ ಕಾಮಗಾರಿ ವೀಕ್ಷಿಸಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ- ರೇವಣ ಸಿದ್ದೇಶ್ವರ ಏತ ನೀರಾವರಿ ಅಡಿಗಲ್ಲು ಸಮಾರಂಭ ಹಾಗೂ ವಿಜಯಪುರ ವಿಮಾನ ನಿಲ್ದಾಣ ಫೆಬ್ರವರಿಯಲ್ಲಿ ಲೋಕಾರ್ಪಣೆ - ಸಚಿವರ ಮಾಹಿತಿ

Water Resources Minister Govind Karjola
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
author img

By

Published : Jan 24, 2023, 10:56 PM IST

ವಿಜಯಪುರ: ವಿಜಯಪುರ ವಿಮಾನ ನಿಲ್ದಾಣ ಹಾಗೂ ರೇವಣ ಸಿದ್ದೇಶ್ವರ ಏತನೀರಾವರಿ ಯೋಜನೆಯ ಅಡಿಗಲ್ಲು ಕಾರ್ಯಕ್ರಮ ಫೆಬ್ರವರಿ ಮೂರನೇ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಳ್ಳಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ನಗರದ ಹೊರ ವಲಯದ ಬುರಣಾಪುರ- ಮದಭಾವಿ ಗ್ರಾಮದ ಮಧ್ಯೆ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ವಿಮಾನ ನಿಲ್ದಾಣದ ಕಾಮಗಾರಿ ಶೇ 75ರಷ್ಟು ಪೂರ್ಣಗೊಂಡಿದೆ. ಫೆಬ್ರವರಿ 15-20ರೊಳಗಾಗಿ ಕಾಮಗಾರಿ ಪೂರ್ಣ ಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಸಭೆ ನಡೆಸಿ ಸೂಚಿಸಲಾಗಿದೆ. ಫೆ.20ರ ನಂತರ ವಿಮಾನ ನಿಲ್ದಾಣ ಪ್ರಧಾನಿ ಮೋದಿಯವರಿಂದ ಲೋಕಾರ್ಪಣೆಗೊಳ್ಳಲಿದೆ. ಇದರೊಂದಿಗೆ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಅಡಿಗಲ್ಲು ನಡೆಯಲಿದೆ ಎಂದು ತಿಳಿಸಿದರು.

ಇಂಡಿಯಾ ವಿಮಾನ ಪ್ರಾಧಿಕಾರ:ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಇದೇ ತಿಂಗಳು ನಡೆಯಬಹುದು. ಅದು ತಡವಾದರೆ ವಿಜಯಪುರ ಮತ್ತು ಶಿವಮೊಗ್ಗ ವಿಮಾನ ನಿಲ್ದಾಣ ಒಂದೇ ದಿನ ಉದ್ಘಾಟನೆಯಾಗಬಹುದು. ವಿಮಾನ ನಿಲ್ದಾಣ ಮೇಲುಸ್ತುವಾರಿ ನೋಡಿಕೊಳ್ಳುವದು ಸಿಬ್ಬಂದಿ ಭರ್ತಿ, ರನ್ ವೇ ಸುಧಾರಣೆ ಸೇರಿದಂತೆ ಕಟ್ಟಡ ನಿರ್ಮಾಣ ನಂತರ ನಡೆಯುವ ಪ್ರಕ್ರಿಯೆ ಸಂಬಂಧ ಎಲ್ಲ ಖಾಸಗಿ ಹಾಗೂ ಏರ್ ಇಂಡಿಯಾ ವಿಮಾನ ಪ್ರಾಧಿಕಾರದ ಮುಖ್ಯಸ್ಥರ ಜತೆ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ‌. ಕಾಮಗಾರಿ ಪೂರ್ಣಗೊಂಡ ನಂತರ ಏರಲೈನ್ಸ್ ಕಂಪನಿಗಳ ಸುಪರ್ದಿಗೆ ವಿಮಾನ ನಿಲ್ದಾಣ ಮುಂದಿನ ಪ್ರಕ್ರಿಯೆ ನಡೆಯಲಿದೆ ಎಂದರು.

ಬಸವೇಶ್ವರರ ಹೆಸರು ಅಂತಿಮ: ದಿ. ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಹೆಸರಿಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಕಾರಜೋಳ ಅವರು, ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರರ ಹೆಸರು ಇಡುವ ಕುರಿತು ಅನುಮೂದನೆಯಾಗಿದೆ. ಈಗ ಹೆಸರು ಬದಲಿಸುವುದು ಸರಿಯಲ್ಲ. ಈ ವಿಚಾರವಾಗಿ ರಾಜಕೀಯ ಮಾಡುವುದು ಬೇಡ ಎಂದು ಮನವಿ ಮಾಡಿದರು.‌

ಕಾಂಗ್ರೆಸ್ ಗೆ ಪಾರ್ಶ್ವವಾಯ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‌ ನಾಯಕರು ಮಾಡುತ್ತಿರುವ ಆರೋಪಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಕಾರಜೋಳ, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅವರ ಬಹುತೇಕ ಮುಖಂಡರು ಜೈಲು ವಾಸ ಅನುಭವಿಸಿದ್ದಾರೆ. ಕೆಲವರು ಜಾಮೀನಿನ ಮೇಲೆ ಹೊರ ಇದ್ದರೆ, ಹಲವರ ವಿರುದ್ಧ ಸಾಕಷ್ಟು ಭ್ರಷ್ಟಾಚಾರದ ಆರೋಪಗಳು ಇವೆ ಎಂದು ಆರೋಪಿಸಿದರು.

ಭ್ರಷ್ಟಾಚಾರ ಆರೋಪ: ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಭ್ರಷ್ಟಾಚಾರದ ಗಂಗೋತ್ರಿ ಎನ್ನುವ ಆರೋಪಕ್ಕೆ ತಿರುಗೇಟು ನೀಡಿದ ಕಾರಜೋಳ ಅವರು, ಸಿದ್ದರಾಮಯ್ಯ ಜೆಡಿಎಸ್ ನಲ್ಲಿ ಉಪಮುಖ್ಯಮಂತ್ರಿ ಇದ್ದಾಗ ಅವರ ಮೇಲೆ ಇದ್ದ ಆರೋಪಗಳ ಬಗ್ಗೆ ಒಮ್ಮೆ ಹಿಂದೆ ತಿರುಗಿ ನೋಡಲಿ. ಬಳಿಕ ಬೇರೆಯವರ ಬಗ್ಗೆ ಮಾತನಾಡಲಿ ಎಂದು ಟಾಂಗ್​ ನೀಡಿದರು.

ರೇವಣಸಿದ್ದೇಶ್ವರ ನೀರಾವರಿ ಬಿಜೆಪಿ ಕೊಡುಗೆ: ರೇವಣಸಿದ್ದೇಶ್ವರ ಏತನೀರಾವರಿ ಯೋಜನೆಯ ರೂವಾರಿಗಳು ನಾವು ಎಂದು ಜೆಡಿಎಸ್ ಬಿಂಬಿಸಿಕೊಳ್ಳುತ್ತಿರುವ ಕುರಿತು ಮಾತನಾಡಿದ ಸಚಿವರು, ಅವರು ಬಿಡಿ ಗೋಲಗುಮ್ಮಟ‌ ಕಟ್ಟಿದವರೇ‌ ನಾವು ಎನ್ನುತ್ತಾರೆ. ನಾನು ಶಾಸಕದ್ದಾಗಲೇ ಈ ನೀರಾವರಿ ಬಗ್ಗೆ ಕೇಳಿದ್ದೆ, ಆ ನಂತರ ಹೋರಾಟ ಸಹ ಮಾಡಿದ್ದೇನೆ.‌ ಈಗ ಜೆಡಿಎಸ್‌ ಕೊಡುಗೆ ಎನ್ನುತ್ತಿದ್ದಾರೆ. ಇದಕ್ಕೆ ಏನು ‌ಹೇಳಲಿ. ಎಂದ ಅವರು ಮಾಜಿ ಪ್ರಧಾನಿ ದೇವೇಗೌಡರ ಪಾತ್ರ ಈ ಯೋಜನೆಯಲ್ಲಿ ಏನು ಇದೆ. ಅವರು ಹಿರಿಯ ರಾಜಕಾರಣಿಗಳು, ಅವರ ಬಗ್ಗೆ ನಾನು ಏನು ಮಾತನಾಡುವದಿಲ್ಲ ಎಂದರು.

ಇದನ್ನೂಓದಿ:ಶೃಂಗೇರಿ ಶಾಸಕ ರಾಜೇಗೌಡ ಕ್ಷಮೆ ಯಾಚಿಸಬೇಕು: ಸಿ ಟಿ ರವಿ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.