ETV Bharat / state

ವಿಜಯಪುರ: ಶಾಸಕ ಯತ್ನಾಳ್​ಗೆ ಜೀವ ಬೆದರಿಕೆ ಹಾಕಿದವರಿಗೆ ಜಾಮೀನು - vijyapura latest news

ನಾನೀಗ ಜೈಲಿಗೆ ಹೋಗಿ ಜಾಮೀನು ಮೇಲೆ ಹೊರ ಬಂದಿದ್ದೇನೆ, ಮುಂದೆಯೂ ಕೂಡಾ ಅಂಬೇಡ್ಕರ್ ಹಾಗೂ ಸಂವಿಧಾನದ ವಿರುದ್ಧ ಯಾರೇ ಮಾತನಾಡಿದರೂ ಕೂಡಾ ಅವರ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಆರೋಪಿ ರಘು ಕಣಮೇಶ್ವರ ತಿಳಿಸಿದರು.

Vijayapura: Bail for accused of life threaten case
ಶಾಸಕರಿಗೆ ಜೀವ ಬೆದರಿಕೆ ಹಾಕಿದವರಿಗೆ ಜಾಮೀನು
author img

By

Published : Sep 10, 2020, 11:52 AM IST

Updated : Sep 10, 2020, 12:29 PM IST

ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಘು ಕಣಮೇಶ್ವರಗೆ ಜಾಮೀನು ಮಂಜೂರಾಗಿದ್ದು, ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಶಾಸಕ ಯತ್ನಾಳ್​ಗೆ ಜೀವ ಬೆದರಿಕೆ ಹಾಕಿದವರಿಗೆ ಜಾಮೀನು

ಜೈಲಿನಿಂದ ಬಿಡುಗಡೆಯಾದ ಬಳಿಕ ನಿನ್ನೆ ರಾತ್ರಿ ವಿಜಯಪುರ ನಗರದಲ್ಲಿರುವ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ರಘು ಕಣಮೇಶ್ವರ, ನಾನೀಗ ಜೈಲಿಗೆ ಹೋಗಿ ಜಾಮೀನು ಮೇಲೆ ಹೊರ ಬಂದಿದ್ದೇನೆ. ಮುಂದೆ ಕೂಡಾ ಅಂಬೇಡ್ಕರ್ ಹಾಗೂ ಸಂವಿಧಾನದ ವಿರುದ್ಧ ಯಾರೇ ಮಾತನಾಡಿದರೂ ಕೂಡಾ ಅವರ ವಿರುದ್ಧ ಹೋರಾಟ ಮುಂದುವರಿಸುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಜಿತೇಂದ್ರ ಕಾಂಬ್ಳೆ, ಶಾಸಕ ಬಸನಗೌಡ ವಿರುದ್ಧ ಪ್ರತಿ ತಾಲೂಕಿನಲ್ಲೂ ಸಹಿತ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸುತ್ತೇವೆ. ಸರ್ಕಾರ ಅವರ ವಿರುದ್ಧ ಕ್ರಮ‌ ಜರುಗಿಸದೆ ಹೋದರೆ ಮುಂಬರುವ ದಿನಗಳಲ್ಲಿ ಸರ್ಕಾರದ ವಿರುದ್ಧವೂ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ರವಾನಿಸಿದರು.

Last Updated : Sep 10, 2020, 12:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.