ETV Bharat / state

ಬೈಕ್​ಗೆ ಕಾರು ಡಿಕ್ಕಿ: ಓರ್ವ ಸಾವು - ರೋಣಿಹಾಳ ಬೈಕ್​ ಕಾರು ಅಪಘಾತ

ರಸ್ತೆ ದಾಟುತ್ತಿದ್ದ ಬೈಕ್ ಸವಾರನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

vijayapura-bike-car-accident
ಬೈಕ್​ಗೆ ಕಾರು ಡಿಕ್ಕಿ
author img

By

Published : Aug 9, 2020, 9:12 PM IST

ವಿಜಯಪುರ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವ್ಯಕ್ತಿವೋರ್ವ ಸಾವನ್ನಪ್ಪಿರುವ ಘಟನೆ ಕೊಲ್ಹಾರ ಸಮೀಪದ ರೋಣಿಹಾಳ ಕ್ರಾಸ್ ಬಳಿ ನಡೆದಿದೆ.

ರೋಣಿಹಾಳ ಗ್ರಾಮದ ಲಾಲಸಾಬ್ ನದಾಫ್ ಮೃತ ವ್ಯಕ್ತಿ.‌ ಬೈಕ್​ನಲ್ಲಿ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಸ್ಥಳದಲ್ಲಿ ಪದೇ ಪದೆ ಇಂತಹ ಅವಘಡಗಳು ನಡೆಯುತ್ತಿದ್ದು, ಮೇಲ್ಸೇತುವೆ ನಿರ್ಮಾಣ ಮಾಡಬೇಕೆಂದು ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಅಲ್ಲದೆ ತಕ್ಷಣ ರೋಡ್​ ಬ್ರೇಕರ್​ ನಿರ್ಮಾಣ ಮಾಡುವಂತೆ ಪಟ್ಟು ಹಿಡಿದು, ಸುಮಾರು ಒಂದು ಗಂಟೆ ರಸ್ತೆ ತಡೆ ನಡೆಸಿದರು.

ಬೈಕ್​ಗೆ ಕಾರು ಡಿಕ್ಕಿ

ಸ್ಥಳಕ್ಕೆ ಬಸವನ ಬಾಗೇವಾಡಿ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದರು. ಕೊನೆಗೆ ರೋಡ್​ ಬ್ರೇಕ್​ ಹಾಕಿಸುವುದಾಗಿ ಪೊಲೀಸರು ಭರವಸೆ ನೀಡಿದರು. ಇದರಿಂದ ಪ್ರತಿಭಟನೆ ಹಿಂಪಡೆಯಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.