ವಿಜಯಪುರ : ಪೌರ ಕಾರ್ಮಿಕರ ಬಾಕಿ ವೇತನ ಪಾವತಿಸುವಂತೆ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಾಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿ, ಕೊರೊನಾ ಭೀತಿಯ ನಡೆವೆಯೂ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಮಹಾನಗರ ಪಾಲಿಕೆ ಸರಿಯಾಗಿ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿದರು.
ಅಲ್ಲದೆ 6 ತಿಂಗಳಿಂದ ಹೊರ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರು ವೇತನವಿಲ್ಲದೆ ಕುಟುಂಬ ನಿರ್ವಹಣೆಗೆ ಕಷ್ಟ ಪಡುತ್ತಿದ್ದಾರೆ. ಆದರೂ ಪಾಲಿಕೆ ಅಧಿಕಾರಿಗಳು ಪೌರ ಕಾರ್ಮಿಕರ ಸಂಬಳ ನೀಡಲು ಮುಂದಾಗುತ್ತಿಲ್ಲ. ಇನ್ನೂ ಕಂಟೇನ್ಮೆಂಟ್ ಝೋನ್‌ಗಳಲ್ಲಿಯೂ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ, ಅವರಿಗೆ ಆರೋಗ್ಯ ಸುರಕ್ಷತಾ ಕಿಟ್ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರಿಗೆ ಜಿಲ್ಲಾಧಿಕಾರಿ ಬಾಕಿ ವೇತನ ನೀಡಲು ಮುಂದಾಗಬೇಕು. ಹೊರ ಗುತ್ತಿಗೆ ಪೌರ ಕಾರ್ಮಿಕರನ್ನ ಖಾಯಂಗೊಳಿಸುವಂತೆ ಆಗ್ರಹಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.