ETV Bharat / state

ಭೀಮಾತೀರದ ನಟೋರಿಯಸ್ ಮಹಾದೇವ ಸಾಹುಕಾರ್​ಗೆ ಕೊರೊನಾ ದೃಢ

ಸುಲಿಗೆ ಯತ್ನ ಪ್ರಕರಣದಲ್ಲಿ ಆರೋಪಿ ಮಹಾದೇವ ಸಾಹುಕಾರ ಭೈರಗೊಂಡನನ್ನು ಜಿಲ್ಲೆಯ ಚಡಚಣ ಪೊಲೀಸರು ಬಂಧಿಸಿದ್ದರು. ನಿನ್ನೆ ಸಂಜೆ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸುವ ಮುನ್ನ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ರಾತ್ರಿ ವೇಳೆಗೆ ಕೊರೊನಾ ಪಾಸಿಟಿವ್ ಇರುವ ಬಗ್ಗೆ ವರದಿ ಬಂದಿದೆ. ಹೀಗಾಗಿ ರಾತ್ರಿಯಿಂದಲೇ ನಗರದ ದರ್ಗಾ ಜೈಲು ಬಳಿ ಕೋವಿಡ್ ರೋಗಿಗಳಿಗಾಗಿ ಸ್ಥಾಪಿಸಿರುವ ವಾರ್ಡ್ ನಲ್ಲಿ ಭೈರಗೊಂಡನನ್ನು ಪ್ರತ್ಯೇಕ ಕೋಣೆಯಲ್ಲಿ ಇರಿಸಲಾಗಿದೆ.

Vijayapura: Corona confirmed to Notorious Mahadeva Sahukar
ಭೀಮಾತೀರದ ನಟೋರಿಯಸ್ ಮಹಾದೇವ ಸಾಹುಕಾರ್​ಗೆ ಕೊರೊನಾ ದೃಢ
author img

By

Published : Jul 23, 2020, 3:07 PM IST

ವಿಜಯಪುರ: ಚಿನ್ನದ ವ್ಯಾಪಾರಿಯೊಬ್ಬರಿಗೆ 5 ಕೋಟಿ ರೂಪಾಯಿಗಳ ಬೇಡಿಕೆ ಇಟ್ಟಿದ್ದ ಭೀಮಾತೀರದ ನಟೋರಿಯಸ್ ಮಹಾದೇವ ಸಾಹುಕಾರ ಭೈರಗೊಂಡಗೆ ಕೊರೊನಾ ವೈರಸ್​ ತಗುಲಿರುವುದು ದೃಢವಾಗಿದೆ.

ಸುಲಿಗೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಮಹಾದೇವ ಸಾಹುಕಾರ ಭೈರಗೊಂಡನನ್ನು ಜಿಲ್ಲೆಯ ಚಡಚಣ ಪೊಲೀಸರು ಬಂಧಿಸಿದ್ದರು. ನಿನ್ನೆ ಸಂಜೆ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸುವ ಮುನ್ನ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ರಾತ್ರಿ ವೇಳೆಗೆ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಹೀಗಾಗಿ ರಾತ್ರಿಯಿಂದಲೇ ನಗರದ ದರ್ಗಾ ಜೈಲು ಬಳಿ ಕೋವಿಡ್ ರೋಗಿಗಳಿಗಾಗಿ ಸ್ಥಾಪಿಸಿರುವ ವಾರ್ಡ್ ನಲ್ಲಿ ಭೈರಗೊಂಡನನ್ನು ಪ್ರತ್ಯೇಕ ಕೋಣೆಯಲ್ಲಿ ಇರಿಸಲಾಗಿದೆ.

ಇತ್ತ ಮಹಾದೇವ ಸಾಹುಕಾರ ಭೈರಗೊಂಡನನ್ನು ಬಂಧಿಸಿದ್ದ ಪೊಲೀಸರಿಗೆ ಆತಂಕ ಶುರುವಾಗಿದೆ. ಈ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಎಸ್​ಪಿ ಅನುಪಮ್​ ಅಗರವಾಲ್, ಭೈರಗೊಂಡನನ್ನು ಬಂಧಿಸಿರುವ ಪೊಲೀಸರಿಗೂ ಸ್ವ್ಯಾಬ್ ಟೆಸ್ಟ್ ಮಾಡಲಾಗುವುದು. ಒಬ್ಬ ಸರ್ಕಲ್ ಇನ್ಸ್​ಪೆಕ್ಟರ್ ಹಾಗೂ ಕೆಲ ಪೊಲೀಸರು ಭೈರಗೊಂಡನ ಪ್ರಾಥಮಿಕ ಸಂಪರ್ಕದಲ್ಲಿದ್ದು, ಅವರ ಗಂಟಲು ದ್ರವ ಟೆಸ್ಟ್ ಮಾಡಿಸಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.