ವಿಜಯಪುರ: ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಇಂದು 4 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 470ಕ್ಕೆ ಏರಿಕೆಯಾಗಿದೆ.
56 ವರ್ಷದ ಪುರುಷ ಹಾಗೂ 65 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ಇಂದು ಇಬ್ಬರು ಯುವಕರು, ಓರ್ವ ಪುರುಷ ಹಾಗೂ ಮಹಿಳೆಯಲ್ಲಿ ಸೋಂಕು ಕಂಡುಬಂದಿದೆ.
ಇಂದು 28 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯವರೆಗೆ 350 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 109 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.