ವಿಜಯಪುರ: ಜಿಲ್ಲೆಯಲ್ಲಿ ಇಂದು ಹತ್ತು ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 331ಕ್ಕೆ ಏರಿಕೆಯಾಗಿದೆ.
4 ಪುರುಷರು, ಓರ್ವ ಬಾಲಕ, 5 ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದೆ. ಪಿ-7396 ಸಂಪರ್ಕದಿಂದ ಮೂವರು ಪುರುಷರಿಗೆ, ಓರ್ವ ಬಾಲಕನಿಗೆ ಹಾಗೂ ಮೂವರು ಮಹಿಳೆಯರಿಗೆ ಸೋಂಕು ತಗುಲಿದೆ. ಪಿ-7394 ಸಂಪರ್ಕದಿಂದ ಓರ್ವ ಮಹಿಳೆಗೆ ಸೋಂಕು ತಗುಲಿದೆ. ಜ್ವರದಿಂದ ಬಳಲುತ್ತಿದ್ದ 85 ವರ್ಷದ ಮಹಿಳೆ ಹಾಗೂ 57 ವರ್ಷದ ಪುರುಷನಲ್ಲಿ ಕೊರೊನಾ ದೃಢವಾಗಿದೆ. ಕೊರೊನಾ ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಒಟ್ಟು 331ರಲ್ಲಿ 232 ಜನ ಗುಣಮುಖರಾಗಿದ್ದಾರೆ. ಇನ್ನೂ 92 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ 7 ಜನ ಮೃತಪಟ್ಟಿದ್ದಾರೆ.