ETV Bharat / state

ವಿಜಯಪುರ: 121 ಜನರಿಗೆ ಸೋಂಕು... 149 ಗುಣಮುಖ - ಕೊರೊನಾ ವೈರಸ್​​

ಕೋವಿಡ್​ ಸೋಂಕಿತರ ಸಂಖ್ಯೆ ಜೊತೆ ಗುಣಮುಖರ ಸಂಖ್ಯೆಯು ಹೆಚ್ಚಾಗುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಇಂದು 121 ಜನ ಕೊರೊನಾ ಸೋಂಕಿತರು ಪತ್ತೆಯಾದರೆ, 149 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

vijayapura-corona-reports
ವಿಜಯಪುರ ಜಿಲ್ಲೆ
author img

By

Published : Aug 13, 2020, 9:14 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು 121 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 4336ಕ್ಕೆ ಏರಿಕೆಯಾಗಿದೆ.

ಇಂದು 149 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 3338. 951 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ. ಇಲ್ಲಿಯವರೆಗೆ ಸೋಂಕಿನಿಂದ ಇಂದು ಇಬ್ಬರು ಸೇರಿ 47 ಸಾವನ್ನಪ್ಪಿದ್ದಾರೆ.

ರೋಗಿ ಸಂಖ್ಯೆ-102837, 76 ವರ್ಷದ ವೃದ್ಧ ಕೆಮ್ಮು, ಶ್ವಾಸಕೋಶ ತೊಂದರೆಯಿಂದ ಜು.23 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಜು.29 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರೋಗಿ ಸಂಖ್ಯೆ-149248 ಆ.6 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಆ.11 ರಂದು ಮೃತ ಪಟ್ಟಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ಇಲ್ಲಿಯವರೆಗೆ 43,043 ಜನರ ಮೇಲೆ ನಿಗಾ ಇಡಲಾಗಿದೆ. 58,483 ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 52,765 ಜನರ ವರದಿ ನೆಗಟಿವ್ ಬಂದಿದೆ. 4336 ಜನರ ವರದಿ ಪಾಸಿಟಿವ್ ಬಂದಿದೆ. ಇನ್ನೂ 1383 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.