ETV Bharat / state

ಕೊರೊನಾ: ಒಂದೇ ದಿನ 200ರ ಗಡಿ ದಾಟಿದ ವಿಜಯಪುರ!

ವಿಜಯಪುರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ 232 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದ ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ.

vijayapura-corona-reports
ವಿಜಯಪುರ ಕೊರೊನಾ ಸೊಂಕಿತರ ಸಂಖ್ಯೆ
author img

By

Published : Aug 15, 2020, 11:04 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು ಮೊದಲ ಬಾರಿಗೆ 232 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಜನರ ಆತಂಕಕ್ಕೆ ಕಾರಣವಾಗಿದೆ.

ನಿನ್ನೆ ಒಂದೇ ದಿನ 1890 ಜನರ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಈ ಹಿನ್ನೆಲೆ ಹೆಚ್ಚಿನ ಜನರಲ್ಲಿ ಸೋಂಕು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾಹಿತಿ ನೀಡಿದ್ದಾರೆ.

ಇಲ್ಲಿವರೆಗೆ ಜಿಲ್ಲೆಯಲ್ಲಿ 4712 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 135 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 3595ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಸಹ ಮತ್ತಿಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 51ಕ್ಕೆ ಏರಿದೆ.

ನಗರದ ಕುಂಬಾರ ಗಲ್ಲಿಯ ರೋಗಿ‌ ಸಂಖ್ಯೆ- 135717, 66 ವರ್ಷದ ವೃದ್ಧ ತೀವ್ರ ಉಸಿರಾಟದ ತೊಂದರೆಯಿಂದ ಜು.23 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆ.3ರಂದು ಮೃತಪಟ್ಟಿದ್ದಾರೆ. ವಿಜಯಪುರದ ಕಲ್ಲೂರ ನಿವಾಸಿ ರೋಗಿ‌ ಸಂಖ್ಯೆ-100916, 40 ವರ್ಷದ ವ್ಯಕ್ತಿ ತೀವ್ರ ಉಸಿರಾಟಿನ ತೊಂದರೆಯಿಂದ ಜು. 22ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಆ. 1 ರಂದು ಮೃತಪಟ್ಟಿದ್ದಾರೆ. ಇವರ ಅಂತ್ಯಸಂಸ್ಕಾರ ವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 1066 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 43,441ಜನರ ಮೇಲೆ ನಿಗಾ ಇಡಲಾಗಿದೆ. 60,264 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 54,264 ಜನರ ವರದಿ ನೆಗಟಿವ್ ಆಗಿದೆ. 4712 ಜನರಿಗೆ ಪಾಸಿಟಿವ ದೃಢಪಟ್ಟಿದೆ. ಇನ್ನೂ 895 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.