ETV Bharat / state

ವಿಜಯಪುರ: ಐದು ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ... ಮತ್ತೆ ಮೂವರು ಬಲಿ

ವಿಜಯಪುರ ಜಿಲ್ಲೆಯಲ್ಲಿ ಇಂದು 64 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕೊರೊನಾದಿಂದ 220 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆ
author img

By

Published : Aug 19, 2020, 12:13 AM IST

ವಿಜಯಪುರ: ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಐದು ಸಾವಿರದ ಗಡಿ ದಾಟಿದೆ. ಸೋಮವಾರ 803 ಜನರ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಇಂದು 64 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಈವರೆಗೆ 5040 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 220 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 4163ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಸಹ ಮೂವರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 60ಕ್ಕೆ ಏರಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 817 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 44,141 ಜನರ ಮೇಲೆ ನಿಗಾ ಇಡಲಾಗಿದೆ. 61,708 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 55,708 ಜನರ ವರದಿ ನೆಗೆಟಿವ್ ಬಂದಿದೆ. 5040 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 960 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​​ಕುಮಾರ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.