ವಿಜಯಪುರ: ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧದಲ್ಲಿ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ಜಿಲ್ಲೆಯ 16 ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಕುರಿತಂತೆ ವಿದ್ಯಾರ್ಥಿಗಳು ಹಾಗೂ ಪಾಲಕರ ಜೊತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಮಾತುಕತೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರನ್ನು ಕರೆದು ಮಾತನಾಡಿದ ಜಿಲ್ಲಾಧಿಕಾರಿಗಳು, ಮುಂದಿನ ಶೈಕ್ಷಣಿಕ ಭವಿಷ್ಯದ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಬಹುತೇಕ ವಿದ್ಯಾರ್ಥಿಗಳು ಭಾರತದಲ್ಲಿ ತಮ್ಮ ಎಂಬಿಬಿಎಸ್ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಡಿಸಿ, ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.