ETV Bharat / state

ಯೋಜನಾ ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ವಿಜಯಪುರ ಡಿಸಿ - ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಮಿಷನ್ ಸಮನ್ವಯ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ಸಂಭಾವ್ಯ ಕ್ಷೇತ್ರಗಳ ಕುರಿತು ಸಮಗ್ರ ಸಮೀಕ್ಷೆ ನಡೆಸಲಾಗಿದೆ. ಜಿಲ್ಲೆಯ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಸೂಕ್ತ ಉತ್ತೇಜನ ನೀಡುವುದು ಈಗಿನ ಅವಶ್ಯಕತೆ ಎಂದರು.

meeting
meeting
author img

By

Published : Jul 7, 2020, 11:31 AM IST

ವಿಜಯಪುರ: ಜಿಲ್ಲೆಯ ಪ್ರಮುಖ ಬೆಳೆಯಾದ ಬಿಳಿಜೋಳ ಹಾಗೂ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ಒಣದ್ರಾಕ್ಷಿ ಹಾಗೂ ಲಿಂಬೆ ಬೆಳೆಗೆ ಸೂಕ್ತ ಮಾರುಕಟ್ಟೆ, ಮಾರುಕಟ್ಟೆ ಸಂಪರ್ಕ ಒದಗಿಸುವ ಜೊತೆಗೆ ಆಹಾರ ಸಂಸ್ಕರಣೆಗೆ ಅನುಕೂಲವಾಗುವ ಯೋಜನಾ ವರದಿಯೊಂದನ್ನು ಸಿದ್ದಪಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಮಿಷನ್ ಸಮನ್ವಯ ಸಮಿತಿ ಸಭೆ ನಡೆಸಿದ ಅವರು ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ಸಂಭಾವ್ಯ ಕ್ಷೇತ್ರಗಳ ಕುರಿತು ಸಮಗ್ರ ಸಮೀಕ್ಷೆ ನಡೆಸಲಾಗಿದ್ದು, ಜಿಲ್ಲೆಯ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಸೂಕ್ತ ಉತ್ತೇಜನ ನೀಡುವುದು ಅವಶ್ಯಕವಾಗಿದೆ ಎಂದರು.

vijayapura dc meeting
ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ನೇತೃತ್ವದಲ್ಲಿ ಸಭೆ

ಮಹಾರಾಷ್ಟ್ರ ರಾಜ್ಯದಲ್ಲಿ ದ್ರಾಕ್ಷಿ ಬೆಳೆಗಾರರಿಗೆ ಉತ್ತೆಜನ ನೀಡಲು ಮಹಾಗ್ರೇಪ್ಸ್ ಎಂಬ ಸಂಸ್ಥೆಯಡಿ ಸೂಕ್ತಬೆಲೆ, ಮಾರುಕಟ್ಟೆ ವ್ಯವಸ್ಥೆ, ಸಂಪರ್ಕ ಕಲ್ಪಿಸಲಾಗಿದೆ. ಅದರಂತೆ ವಿಜಯಪುರ ಜಿಲ್ಲೆಯ ಹಲವು ಬೆಳೆಗಳಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಲೆ ಮತ್ತು ಮಹತ್ವ ದೊರಕಿಸಲು ಸೂಕ್ತ ಹಾಗೂ ಯೋಜನಾ ಬದ್ಧವಾಗಿ ಕಾರ್ಯ ನಿರ್ವಹಿಸಬೇಕಿದೆ. ವಿಶೇಷವಾಗಿ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ ಮತ್ತು ರೈತ ಉತ್ಪಾದಕರ ಸಂಘಗಳ ಮಧ್ಯೆ ಸಮನ್ವಯ ವ್ಯವಸ್ಥೆಯೊಂದು ಜಾರಿಗೊಳ್ಳುವ ಅಗತ್ಯವಿದೆ. ಇದರಿಂದ ರೈತರ ಸ್ಥಿತಿ ಸುಧಾರಣೆ, ಸುಶಿಕ್ಷಿತರ ಉದ್ಯೋಗಕ್ಕೂ ನೆರವಾಗಲಿದ್ದು, ಕೃಷಿ, ತೊಟಗಾರಿಕೆ ಇಲಾಖೆಗಳು ಈ ದಿಸೆಯಲ್ಲಿ ಹೆಚ್ಚು ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಮತ್ತು ಲಾಕ್‍ಡೌನ್​​​ನಿಂದ ಪ್ರಭಾವಿತವಾಗಿರುವ ಮಹಿಳೆಯರು, ನಿರುದ್ಯೋಗಿಗಳು ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಹಿನ್ನಡೆ ಉಂಟಾಗಿದ್ದು ಇವುಗಳ ಉತ್ತೇಜನಕ್ಕೆ ಸರ್ಕಾರಗಳು ಕ್ರಮಕೈಗೊಳ್ಳುತ್ತಿವೆ. ಸ್ಥಳೀಯ ಕೌಶಲ್ಯಕ್ಕೆ ಉತ್ತೇಜನ ನೀಡುವ ಜೊತೆಗೆ ಮೂಲ ಸೌಕರ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಸೇರಿದಂತೆ ಇಲ್ಲಿನ ಪ್ರತಿಭೆ ಬೇರೆ ಕಡೆ ಹೋಗದಂತೆ ನೋಡಿಕೊಳ್ಳುವ ಮುಂದಾಲೋಚನಾ ಸಮೀಕ್ಷೆ ವರದಿಯನ್ನು ಸಿದ್ದಪಡಿಸಬೇಕು ಎಂದರು.

ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದ ಮೂಲಕ ಹೆಚ್ಚು ಲಾಭ ದೊರಕಿಸುವ ಮತ್ತು ಉದ್ಯೋಗ ಸೃಷ್ಟಿಸುವ ಸಮಗ್ರ ಅಧ್ಯಯನ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಹಂತ - ಹಂತವಾಗಿ ಪ್ರತಿ ಕ್ಷೇತ್ರದಲ್ಲಿ ಸಾಧಿಸಬೇಕಾದ ಪ್ರಗತಿಯ ಬಗ್ಗೆ ಕುಲಂಕಷವಾಗಿ ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವಿವಿಧ ಕೌಶಲ್ಯ ತರಬೇತಿ ಉದ್ಯೋಗ ಸೃಜನೆಯ ಅವಕಾಶಗಳ ಕುರಿತು ಎಂ.ಜಿ.ಎನ್.ಎಫ್ ಸಿಬ್ಬಂದಿ ರಂಜಿನಿ ಮಾಹಿತಿ ನೀಡಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಖಾಸಗಿ ಉದ್ಯಮಿಗಳ ಮಾಲೀಕರು ಸೇರಿದಂತೆ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ರಮೇಶ ದೇಸಾಯಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.