ETV Bharat / state

ಮತ ಎಣಿಕೆಗೆ ಸಜ್ಜುಗೊಂಡ ವಿಜಯಪುರ ಜಿಲ್ಲಾಡಳಿತ

author img

By

Published : May 22, 2019, 10:27 AM IST

ನಾಳೆ ನಡೆಯಲಿರುವ ಮತ ಎಣಿಕೆ ಕಾರ್ಯಕ್ಕೆ ವಿಜಯಪುರ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಡಿಸಿ ಎಂ.ಕನಗವಲ್ಲಿ ತಿಳಿಸಿದ್ದಾರೆ.

ಎಂ.ಕನಗವಲ್ಲಿ

ವಿಜಯಪುರ: ಲೋಕಸಭಾ ಚುನಾವಣಾ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದ್ದು, ವಿಜಯಪುರದ ಸೈನಿಕ ಶಾಲೆಯಲ್ಲಿ ನಿರ್ಮಿಸಲಾಗಿರುವ ಮತ ಎಣಿಕೆ ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ. ಎಂಟು ವಿಧಾನಸಭಾ ಕ್ಷೇತ್ರಗಳ ಇವಿಎಂ ಮಷಿನ್​ ಕೌಂಟಿಂಗ್‍ಗಾಗಿ ತಲಾ 14 ಟೇಬಲ್‍ಗಳಂತೆ ಒಟ್ಟು 112 ಟೇಬಲ್‍ಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಎಂ.ಕನಗವಲ್ಲಿ

ಮತ ಎಣಿಕೆಗಾಗಿ 112 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದ್ದು, ಪೋಸ್ಟಲ್ ಬ್ಯಾಲೆಟ್ ಮತ ಎಣಿಕೆಗಾಗಿ 4 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರವಾರು ವಿವಿಧ ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.

ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 17 ಸುತ್ತು, ದೇವರಹಿಪ್ಪರಗಿ 18 ಸುತ್ತು, ಬಸವನ ಬಾಗೇವಾಡಿ 17, ಬಬಲೇಶ್ವರ 18 ಸುತ್ತು, ವಿಜಯಪುರ ನಗರ 19 ಸುತ್ತು, ನಾಗಠಾಣ 22 ಸುತ್ತು, ಇಂಡಿ 20 ಸುತ್ತು, ಸಿಂದಗಿ ವಿಧಾನಸಭಾ ಕ್ಷೇತ್ರದ ಇವಿಎಂಗಳ ಮತ ಎಣಿಕೆ 19 ಸುತ್ತಿನಲ್ಲಿ ನಡೆಯಲಿದೆ ಎಂದು ವಿವರಿಸಿದ್ದಾರೆ.

ನಾಳೆ ಬೆಳಿಗ್ಗೆ 8 ಕ್ಕೆ ಮತ ಎಣಿಕೆ ಕಾರ್ಯವನ್ನು ಆರಂಭಿಸಲಾಗುತ್ತಿದ್ದು, ಇವಿಎಂ ಮತ ಎಣಿಕೆ ಕಾರ್ಯ ಮುಗಿದ ನಂತರ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ವಿವಿಪ್ಯಾಟ್‍ಗಳ ಚೀಟಿಗಳನ್ನು ಏಜೆಂಟರ ಸಮ್ಮುಖದಲ್ಲಿ ಎಣಿಕೆ ಮಾಡಲಾಗುವುದು. ಪೋಸ್ಟಲ್ ಬ್ಯಾಲೆಟ್ ಎಣಿಕೆಗಾಗಿ ಪ್ರತ್ಯೇಕವಾಗಿ 20 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

144 ಮೈಕ್ರೋ ನಿರೀಕ್ಷಕರ ನೇಮಕ: ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತಿ ವಿಧಾನಸಭಾ ಕ್ಷೇತ್ರವಾರು 18 ಜನ ಮತ ಎಣಿಕೆ ಮೇಲ್ವಿಚಾರಕ, 18 ಜನ ಮತ ಎಣಿಕೆ ಸಹಾಯಕ ಹಾಗೂ 18 ಜನ ಮೈಕ್ರೋ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದ್ದು, ಒಟ್ಟಾರೆಯಾಗಿ 144 ಮತ ಎಣಿಕೆ ಮೇಲ್ವಿಚಾರಕರು, 144 ಮತಎಣಿಕೆ ಸಹಾಯಕರು ಹಾಗೂ 144 ಮೈಕ್ರೋ ಅಬ್ಸರ್ವರ್ ನಿಯೋಜಿಸಲಾಗಿದೆ. ಅದೇ ತೆರನಾಗಿ 32 ಜನ ಟ್ಯಾಬುಲೇಷನ್ ಸಿಬ್ಬಂದಿ, 40 ಜನ ಸೀಲಿಂಗ್ ಸಿಬ್ಬಂದಿ, ಇವಿಎಂಗಳನ್ನು ಟೇಬಲ್‍ಗಳಿಗೆ ಸಾಗಿಸಲು 128 ಸಿಬ್ಬಂದಿ ಹಾಗೂ 24 ಜನ ಹಾಜರಾತಿ ಪಡೆಯುವ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದ್ದಾರೆ.

ಮೊಬೈಲ್ ನಿಷೇಧ: ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಸೇರಿದಂತೆ ಚುನಾವಣಾ ಏಜೆಂಟರಾದಿಯಾಗಿ ಯಾರೊಬ್ಬರು ಮೊಬೈಲ್ ಫೋನ್ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿಲ್ಲ. ಅಧಿಕೃತ ಪ್ರವೇಶ ಪತ್ರ ಹೊಂದಿವರಿಗೆ ಮಾತ್ರ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಗುತ್ತಿದೆ. ಮತ ಎಣಿಕೆ ಕೇಂದ್ರವಾದ ಸೈನಿಕ ಶಾಲೆಯ 1ನೇ ಗೇಟ್‍ನಿಂದ ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮದವರಿಗೆ ಪ್ರವೇಶ ನೀಡಲಾಗುತ್ತಿದ್ದು, 2ನೇ ಗೇಟ್‍ನಿಂದ ಮತ ಎಣಿಕೆ ಏಜೆಂಟರಿಗೆ ಒಳ ಬಿಡಲಾಗುತ್ತದೆ.

ಮತ ಎಣಿಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 22ರಂದು ಮಧ್ಯರಾತ್ರಿಯಿಂದ 23ರ ಮಧ್ಯರಾತ್ರಿಯವರೆಗೆ ಮದ್ಯ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.

sample description

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.