ವಿಜಯಪುರ: ದಕ್ಷ ಆಡಳಿತಗಾರರೆಂದು ಗುರುತಿಸಿಕೊಂಡಿದ್ದ ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರನ್ನು ರಾಜ್ಯ ಸರ್ಕಾರ ವರ್ಗಾಯಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಪಿ.ಸುನೀಲ ಕುಮಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ವೈ.ಎಸ್.ಪಾಟೀಲ ಅವರನ್ನು ಮೈಸೂರಿನ ಆಡಳಿತ ತರಬೇತಿ ವಿಭಾಗದ ಜಂಟಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ವಿಜಯಪುರ ಡಿಸಿಯಾಗಿದ್ದ ವೈ.ಎಸ್.ಪಾಟೀಲ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದರು. ಇಂತಹ ಸಂದರ್ಭದಲ್ಲಿ ಅವರನ್ನು ವರ್ಗಾವಣೆ ಮಾಡಿರುವುದು ಜಿಲ್ಲೆಯ ಜನತೆಯಲ್ಲಿ ಅಚ್ಚರಿ ಮೂಡಿಸಿದೆ.