ವಿಜಯಪುರ: ಕೋವಿಡ್ ನಿಯಂತ್ರಣ ಕುರಿತು ರಾಜ್ಯ ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ವಿಡಿಯೋ ಕಾನ್ಫರೆನ್ಸ್ನಲ್ಲಿ ವಿಜಯಪುರ ಅಧಿಕಾರಿಗಳ ಕಾರ್ಯ ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ , ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಶಹಬ್ಬಾಸ್ ಗಿರಿ ನೀಡಿದ್ದಾರೆ. ಕೊರೊನಾ ಲಸಿಕಾಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜಿಲ್ಲೆಯಲ್ಲಿ ಎರಡನೇ ಡೋಸ್ ಲಸಿಕಾಕರಣ ಶೇ 91ರಷ್ಟಾಗಿದೆ. ಫೆಬ್ರವರಿ ಮೊದಲ ವಾರದಲ್ಲಿ ಎರಡನೇ ಡೋಸ್ ಲಸಿಕಾಕರಣ ಪೂರ್ಣಗೊಳಿಸಲಾಗುತ್ತದೆ ಎಂದು ಸಿಎಂಗೆ ಭರವಸೆ ನೀಡಿದ್ದೇವೆ ಎಂದರು.
ನಿನ್ನೆ ನಡೆದ 15 ಜಿಲ್ಲೆಗಳ ಸಭೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಅತೀ ಹೆಚ್ಚು ಲಸಿಕಾಕರಣ ಆಗಿದ್ದು, ಮೊದಲ ಸ್ಥಾನದಲ್ಲಿದ್ದೇವೆ. 15 ರಿಂದ 17 ವರ್ಷದೊಳಗಿನ ಮಕ್ಕಳಿಗೆ 61 ಪ್ರತಿಶತ ಲಸಿಕಾಕರಣವಾಗಿದೆ. ಶಾಲೆಯಿಂದ ಹೊರಗುಳಿದ, ಮನೆಯಲ್ಲಿರುವ ಮಕ್ಕಳಿಗೆ ಮನೆ ಬಾಗಿಲಿಗೆ ತೆರಳಿ ಕೋವಿಡ್ ಲಸಿಕೆ ಹಾಕಲು ಸಿಎಂ ಸೂಚನೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಬೂಸ್ಟರ್ ಡೋಸ್ ಹಾಕಲು ಸಿಎಂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರ ಹೊರತಾಗಿ ವೀಕೆಂಡ್ ಕರ್ಪ್ಯೂ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ, ಕೋವಿಡ್ ಬಗ್ಗೆ ಪಾಸಿಟಿವಿಟಿ ರೇಟ್, ಚಿಕಿತ್ಸೆ, ಆಸ್ಪತ್ರೆಯಲ್ಲಿರೋ ಪಾಸಿಟಿವ್ ಪೀಡಿತರ ಸಂಖ್ಯೆ ಬಗ್ಗೆ ಸಿಎಂ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು.
ಓದಿ: ಲಂಡನ್ನಲ್ಲಿರುವ ಮನೆಯನ್ನೂ ಕಳೆದುಕೊಂಡ ವಿಜಯಮಲ್ಯ! ಯಾಕೆ ಗೊತ್ತಾ?