ವಿಜಯಪುರ: ಉಪಾಹಾರ ಸೇವಿಸಿದ ವಿದ್ಯಾರ್ಥಿನಿಯರು ವಾಂತಿ ಭೇದಿಯಿಂದ ಅಸ್ವಸ್ಥಯಿಂದ ಬಳಲಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ನಡೆದಿದೆ. ತಡವಲಗಾ ಗ್ರಾಮದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ 25 ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಅವರನ್ನು ತಡವಲಗಾ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥ ವಿದ್ಯಾರ್ಥಿನಿಯರಿಗೆ ಅಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಗೆ ಇಂಡಿ ಬಿಇಒ ವಸಂತ ರಾಠೋಡ್ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ಸದ್ಯ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಇದನ್ನೂ ಓದಿ: ಕೊಳ್ಳೇಗಾಲ ವೆಸ್ಲಿ ಸೇತುವೆ ಬಳಿ ಗಾಂಜಾ ಘಾಟು ಜೋರು.. ಸ್ಥಳೀಯರಿಗೆ ಕಿರಿಕಿರಿ!