ವಿಜಯಪುರ : ಜಿಲ್ಲೆಯ ಸಿಂದಗಿ ತಾಲೂಕಿನ ಬನಹಟ್ಟಿ ಗ್ರಾಮದ ಹೊರವಲಯದ ಬಾವಿಯಲ್ಲಿ ಯುವಕ ಹಾಗೂ ಅಪ್ರಾಪ್ತೆಯ ಶವ ಪತ್ತೆಯಾಗಿವೆ. ಪ್ರೀತಿಗೆ ಕುಟುಂಬಸ್ಥರು ಒಪ್ಪದ ಹಿನ್ನೆಲೆ ಇವರಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಿವಕುಮಾರ ಚೌಧರಿ (19) ಹಾಗೂ ಶಬಾನಾ ಮುಜಾವರ (16) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಪರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ, ಪ್ರೀತಿಗೆ ಜಾತಿ ಅಡ್ಡ ಬರುತ್ತದೆ ಎಂಬ ಕಾರಣದಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸ್ ಠಾಣೆ ಪಿಎಸ್ಐ ರವಿ ಯಡವಣ್ಣವರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ತನಿಖೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.