ETV Bharat / state

ವಿಜಯಪುರ: ಅಧಿಕಾರಿಗಳ ಜೊತೆ ಸಚಿವೆ ಶಶಿಕಲಾ ಜೊಲ್ಲೆ ಸಭೆ - Minister Shashikala Jolle news

ವಿಜಯಪುರ ನಗರದ ನೂತನ ಪ್ರವಾಸಿ ಮಂದಿರದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಿಸುವ ಮತ್ತು ಪ್ರವಾಹ ಮುನ್ನೆಚ್ಚರಿಕೆ ಕುರಿತು ಅಧಿಕಾರಿಗಳ ಜೊತೆ ಸಚಿವೆ ಶಶಿಕಲಾ ಜೊಲ್ಲೆ ಸಭೆ ನಡೆಸಿದರು.

ಅಧಿಕಾರಿಗಳ ಜತೆ ಸಚಿವೆ ಶಶಿಕಲಾ ಜೊಲ್ಲೆ ಸಭೆ
ಅಧಿಕಾರಿಗಳ ಜತೆ ಸಚಿವೆ ಶಶಿಕಲಾ ಜೊಲ್ಲೆ ಸಭೆ
author img

By

Published : Aug 14, 2020, 7:52 PM IST

ವಿಜಯಪುರ: ಕೋವಿಡ್ ರೋಗಿಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಎಬಿಎಆರ್​​ಕೆ (ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ) ಅಡಿಯಲ್ಲಿ ದಾಖಲಿಸಬೇಕು ಹಾಗೂ ವ್ಯವಸ್ಥಿತವಾದ ಚಿಕಿತ್ಸೆ ನೀಡಬೇಕು. ಜಿಲ್ಲಾ ಆರೋಗ್ಯ ಇಲಾಖೆಯಿಂದ ಆಯಾ ಖಾಸಗಿ ಆಸ್ಪತ್ರೆಗಳಿಗೆ ತಿಳಿಹೇಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದ ನೂತನ ಪ್ರವಾಸಿ ಮಂದಿರದಲ್ಲಿ ಕೋವಿಡ್- 19 ಸಾಂಕ್ರಾಮಿಕ ರೋಗ ನಿಯಂತ್ರಿಸುವ ಮತ್ತು ಪ್ರವಾಹ ಮುನ್ನೆಚ್ಚರಿಕೆ ಕುರಿತು ಸಭೆ ನಡೆಸಿದರು. ಕೋವಿಡ್ ರೋಗಿಗಳು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಲು ಅವರ ಆಧಾರ್​ ಹಾಗೂ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದು ಎಬಿಎಆರ್​​ಕೆ ಅಡಿ ಚಿಕಿತ್ಸೆ ನೀಡುವಂತಾಗಬೇಕು. ಇದರಿಂದ ರೋಗಿಗಳು ಭರಿಸುವ ವೆಚ್ಚ ಕಡಿಮೆಯಾಗಲಿದ್ದು, ಸಾರ್ವಜನಿಕರಿಗೆ ಸಹಾಯವಾಗಲಿದೆ ಎಂದರು.

ಅಧಿಕಾರಿಗಳ ಜತೆ ಸಚಿವೆ ಶಶಿಕಲಾ ಜೊಲ್ಲೆ ಸಭೆ
ಅಧಿಕಾರಿಗಳ ಜೊತೆ ಸಚಿವೆ ಶಶಿಕಲಾ ಜೊಲ್ಲೆ ಸಭೆ

ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ವಿಜಯಪುರ ಜಿಲ್ಲೆ ವ್ಯವಸ್ಥಿತವಾಗಿ ಹೋರಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳ ಜೊತೆ ಖಾಸಗಿ ಆಸ್ಪತ್ರೆಗಳು ಕೈಜೋಡಿಸಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲಾಗುತ್ತಿರುವುದರಿಂದ ಸರ್ಕಾರ ನಿಗದಿ ಮಾಡಿರುವ ಹಣಕ್ಕಿಂತ ಹೆಚ್ಚಿನ ದರ ವಸೂಲಿ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಾರದಿರುವುದು ಸಂತಸದ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ದರ ಹಾಕದಂತೆ ಸಂಬಂಧಿಸಿದ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ಸೂಚಿಸಿದರು.

ಅಧಿಕಾರಿಗಳ ಜತೆ ಸಚಿವೆ ಶಶಿಕಲಾ ಜೊಲ್ಲೆ ಸಭೆ
ಅಧಿಕಾರಿಗಳ ಜೊತೆ ಸಚಿವೆ ಶಶಿಕಲಾ ಜೊಲ್ಲೆ ಸಭೆ

ಮಹಾರಾಷ್ಟ್ರದ ಜೊತೆ ಸತತ ಸಂಪರ್ಕ:

ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರವಾಹ ಸಂಭವಿಸಿ ಸಾಕಷ್ಟು ಹಾನಿಗಳಾಗಿದ್ದು, ಈ ಸಾಲಿನಲ್ಲಿ ಯಾವುದೇ ರೀತಿಯ ಹಾನಿಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮಹಾರಾಷ್ಟ್ರದ ಜಲಾಶಯಗಳ ನೀರು ಬಿಡುಗಡೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಿ. ಮಳೆ ಪ್ರಮಾಣ ಹಾಗೂ ಜಲಾಶಯದ ಪ್ರಮಾಣಗಳ ಬಗ್ಗೆ ಪ್ರತಿ ದಿನ ಮಾಹಿತಿಯನ್ನು ಪಡೆದುಕೊಂಡು, ಮುನ್ನೆಚ್ಚರಿಕೆ ವಹಿಸಲೂ ಸಹ ಸೂಚಿಸಿದರು.

ನದಿ ತೀರದ ಪ್ರದೇಶಗಳಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಈಗಾಗಲೇ ರಚಿಸಲಾದ ಗ್ರಾಮ ಮಟ್ಟದ ಕಾರ್ಯಪಡೆ ಕಮಿಟಿಯು ಪ್ರವಾಹಕ್ಕೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ನೀಡುತ್ತಿದ್ದು, ಪ್ರವಾಹದ ಮುನ್ನೆಚ್ಚರಿಕೆಯಾಗಿ ಬೋಟ್‍ಗಳ ವ್ಯವಸ್ಥೆ ಮಾಡಿದೆ. ನದಿ ತೀರದ ಪ್ರದೇಶಗಳಲ್ಲಿ ಡಂಗೂರ ಬಾರಿಸುವ ಮೂಲಕ ಸೂಚನೆ ನೀಡಿ ಎಂದು ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.