ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸೋಂಕಿತರೊಂದಿಗೆ ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದಾರೆ.
ಈ ಕುರಿತು ಫೇಸ್ಬುಕ್ನಲ್ಲಿ ಮಾಹಿತಿ ನೀಡಿರುವ ಯತ್ನಾಳ್, ಕೆಲವು ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರುವುದಾಗಿ ಪೋಸ್ಟ್ ಮಾಡಿದ್ದಾರೆ. 'ನನ್ನ ಕೆಲವು ಒಡನಾಡಿಗಳು ಮತ್ತು ಸ್ನೇಹಿತರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ನನ್ನ ಕುಟುಂಬ ಸೇರಿದಂತೆ ಎಲ್ಲರಿಂದಲೂ ಪ್ರತ್ಯೇಕವಾಗಿರುತ್ತೇನೆ. ದೇವರ ಅನುಗ್ರಹದಿಂದ ಮತ್ತು ಜನರ ಆಶೀರ್ವಾದದಿಂದ ನಾನು ಆದಷ್ಟು ಬೇಗ ಆರೋಗ್ಯವಂತನಾಗಿ ನನ್ನ ಕ್ಷೇತ್ರಕ್ಕೆ ಮರಳುವೆನು' ಎಂದು ಬರೆದುಕೊಂಡಿದ್ದಾರೆ.