ವಿಜಯಪುರ: ಕಾಲುವೆ ಪಕ್ಕದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರು ಗ್ರಾಮದಲ್ಲಿ ನಡೆದಿದೆ. ಜನಿಸಿದ ಬಳಿಕ ಮಗುವನ್ನು ಬಟ್ಟೆಯಲ್ಲಿ ಸುತ್ತಿ ಕಾಲುವೆ ಬಳಿ ತಾಯಿ ಎಸೆದು ಹೋಗಿದ್ದಾಳೆ.
ಶಿವಣ್ಣ ಪಡಶೆಟ್ಟಿ ಎಂಬುವವರು ಈ ಮಗುವನ್ನು ಮೊದಲು ನೋಡಿದ್ದಾರೆ. ಬಳಿಕ ಪೊಲೀಸರಿಗೆ ಹಾಗೂ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಯತ್ನಾಳ್- ಎಂ.ಪಿ.ರೇಣುಕಾಚಾರ್ಯ ದಿಢೀರ್ ಭೇಟಿ: ಒಂದೂವರೆ ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆ!
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಮಗುವಿನ ತಾಯಿ ಪತ್ತೆಗೆ ತಾಳಿಕೋಟೆ ಪೊಲೀಸರು ಮುಂದಾಗಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ