ವಿಜಯಪುರ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಡಾಬಾ, ಹೋಟೆಲ್ ಗಳ ಮೇಲೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸರು 49 ಪ್ರಕರಣ ದಾಖಲಿಸಿಕೊಂಡು, 51 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಡಾಬಾ, ಹೋಟೆಲ್ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿರುವ ಕುರಿತು ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ದಾಳಿ ನಡೆಸಿರುವ ಪೊಲೀಸರು, ಒಟ್ಟು 128.74 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.
38 ಡಾಬಾ, 5 ಹೋಟೆಲ್ ಹಾಗೂ 6 ವಿವಿಧ ಗ್ರಾಮಗಳ ಮೇಲೆ ದಾಳಿ ನಡೆಸಿ ಒಟ್ಟು 51 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.