ವಿಜಯಪುರ: ಭೀಮಾ ತೀರದ ಮಹಾದೇವ ಸಾಹುಕಾರ ಭೈರಗೊಂಡ ಕೊಲೆ ಯತ್ನ ಹಾಗೂ ಆತನ ಅಂಗರಕ್ಷಕ, ಕಾರು ಚಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ವಿಜಯಪುರ ನಗರದ ಬಂಬಳ ಅಗಸಿ ನಿವಾಸಿ ಗಳಾದ ಹಣಮಂತ ಮಳೆಪ್ಪನವರ ಹಾಗೂ ಈರಣ್ಣ ಬಡಿಗೇರ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎರಡು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ಹಿನ್ನೆಲೆ
ನವೆಂಬರ್ 2ರಂದು ವಿಜಯಪುರ ಹೊರವಲಯದ ಕನ್ನಾಳ ಕ್ರಾಸ್ ಬಳಿ ಮಹಾದೇವ ಸಾಹುಕಾರ ಹಾಗೂ ಆತನ ಬೆಂಬಲಿಗರನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ಸದ್ಯ ಮಹಾದೇವ ಸಾಹುಕಾರ ಭೈರಗೊಂಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಹುಕಾರನ ಇಬ್ಬರು ಬೆಂಬಲಿಗರು ಗುಂಡೇಟಿಗೆ ಬಲಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 19 ಜನರನ್ನು ಬಂಧಿಸಲಾಗಿದೆ. ಇವರು ಇಬ್ಬರು ಸೇರಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.