ವಿಜಯಪುರ: ಕಾರ್ಮಿಕ ಕಾನೂನು ತಿದ್ದುಪಡಿ ರದ್ದು, ಯುವ ಜನತೆಗೆ ಉದ್ಯೋಗ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ, ಕೊರೊನಾ ವೈಸರ್ ಭೀತಿಯಿಂದ ದೇಶದ ಜನ ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನದಿಂದ ದಿನಕ್ಕೆ ಅನೇಕ ಯುವಕರು ಉದ್ಯೋಗ ಕಳೆದುಕೊಳ್ಳುವಂತಾಗಿದೆ. ಆದರೆ ಸರ್ಕಾರ ಮಾತ್ರ ಬಡ ಜನರ ನೆರವಿಗೆ ಬರುತ್ತಿಲ್ಲ. ಇತ್ತ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಯುವಕರಿಗೆ ಸರ್ಕಾರ 200 ದಿನಗಳ ಕಾಲ ಉದ್ಯೋಗ ನೀಡಲು ಮುಂದಾಗಬೇಕು. ಅಂತಾರಾಜ್ಯ ವಲಸೆ ಕಾರ್ಮಿಕ ಕಾಯ್ದೆ ತೆಗೆದು ಹಾಕುವ ಪ್ರಸ್ತಾವ ಕೈ ಬಿಡಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ಜಾರಿ ಮಾಡಲು ಹೊರಟಿವೆ. ಅವುಗಳನ್ನ ತಕ್ಷಣತ ಕೈ ಬಿಡುಬೇಕು. ಜೊತೆಗೆ ಸಾರ್ವಜನಿಕ ಇಲಾಖೆಗಳನ್ನು ಖಾಸಗೀಕರಣ ಮಾಡುತ್ತಿರುವುರಿಂದ ದೇಶಕ್ಕೆ ನಷ್ಟವಾಗುತ್ತದೆ. ಸರ್ಕಾರ ಖಾಸಗೀಕರಣ ಕುರಿತಾಗಿ ತಜ್ಞರ ಹಾಗೂ ಜನತೆ ಜೊತೆಗೆ ಚರ್ಚೆ ನಡೆಸಬೇಕು. ಇತ್ತ ಸಮಾಜದಲ್ಲಿ ದಿನದಿಂದ ದಿನಕ್ಕೆ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿದೆ. ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿಯಲ್ಲಿ ಗಲಭೆ ನಡೆದು ಅನೇಕ ಜನರಿಗೆ ನಷ್ಟವಾಗಿದೆ. ಗಲಭೆ ವಿಚಾರವನ್ನು ಸ್ವತಂತ್ರ ನ್ಯಾಯಾಲಯ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.