ವಿಜಯಪುರ: ಗ್ರಾಮ ಪಂಚಾಯಿತಿ ನೌಕರರಿಗೆ 15ನೇ ವೇತನ ಆಯೋಗದಂತೆ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಪರ ಸಂಘಟನೆ ಹಾಗೂ ವಿವಿಧ ನೌಕರರ ಸಂಘದ ವತಿಯಿಂದ ವಿಜಯಪುರ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಗ್ರಾಮ ಪಂಚಾಯಿತಿ ನೌಕರರಿಗೆ ಇಲ್ಲಿಯವರೆಗೆ ವೇತನ ನೀಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಶೇ. 40ರಷ್ಟು ತೆರಿಗೆ ವಸೂಲಾತಿ ಹಣದಿಂದ ಬಾಕಿ ಉಳಿದ ವೇತನ ಪಾವತಿಸಬೇಕು. ನಿವೃತ್ತರಾದವರಿಗೆ ಗ್ರಾಚ್ಯುಟಿ ಕೊಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರು ಜಿಲ್ಲಾ ಪಂಚಾಯ್ತಿ ಸಿಇಒಗೆ ಲಿಖಿತ ಮನವಿ ಸಲ್ಲಿಸಿದರು. ನಂತರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.