ETV Bharat / state

Job Alert: ವಿಜಯಪುರ ಜಿಲ್ಲಾ ಪಂಚಾಯತ್​ನಿಂದ​ ನೇಮಕಾತಿ; ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ - ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಭರ್ತಿ

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ 13 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

vijayapura Recruitment for regional candidates

author img

By ETV Bharat Karnataka Team

Published : Oct 19, 2023, 12:29 PM IST

ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್​ನ 13 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ನೇಮಕಾತಿ ನಡೆಸಲಾಗುವುದು. ಆಸಕ್ತಿ ಹೊಂದಿರುವ ಸೂಕ್ತ ಮತ್ತು ಸ್ಥಳೀಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಖಾಲಿ ಹುದ್ದೆಗಳ ಮಾಹಿತಿ: ಜಿಲ್ಲೆಯಲ್ಲಿ ಖಾಲಿ ಇರುವ 13 ಹುದ್ದೆಗಳ ಮಾಹಿತಿ ಇಲ್ಲಿದೆ.. ವಿಜಯಪುರ ತಾಲೂಕಿನಲ್ಲಿ 1, ಇಂಡಿ ತಾಲೂಕಿನಲ್ಲಿ 3, ನಿಡಗುಂದಿ ತಾಲೂಕಿನಲ್ಲಿ 3, ಮುದ್ದೇಬಿಹಾಳ ತಾಲೂಕಿನಲ್ಲಿ 1, ಸಿಂದಗಿ ತಾಲೂಕಿನಲ್ಲಿ 3 ಹಾಗೂ ಕನ್ನೊಳಿ ಮತ್ತು ಕೊಣ್ಣೂರ ಗ್ರಾಮ ಪಂಚಾಯಿತಿಯಲ್ಲಿ ತಲಾ ಒಂದು ಹುದ್ದೆಗಳು ಖಾಲಿ ಇವೆ.

ಅಧಿಸೂಚನೆ
ಅಧಿಸೂಚನೆ

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.

ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಬಳಿಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ವಿಶೇಷ ಸೂಚನೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಈ ಸಂಬಂಧ ತಹಶೀಲ್ದಾರ್​ ಅವರಿಂದ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಕೆ ವೇಳೆ ಸಲ್ಲಿಸಬೇಕಿದೆ.

ಮಾಸಿಕ ವೇತನ: ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಕನಿಷ್ಠ ವೇತನ 15,196.72 ರೂ. ನಿಗದಿಸಲಾಗಿದ್ದು, ಕಾರ್ಮಿಕ ಇಲಾಖೆ ನಿಗದಿಪಡಿಸುವ ತುಟ್ಟಿ ಭತ್ಯೆಯನ್ನು ಪಾವತಿಸಲಾಗುವುದು.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಸಂಬಂಧಿಸಿದ ಅರ್ಜಿ ನಮೂನೆಯಲ್ಲಿ ಈ ಕೆಳಗಿನ ವಿಳಾಸದಲ್ಲಿ ಪಡೆದು ಈ ಅರ್ಜಿ ಜೊತೆಗೆ ವಿದ್ಯಾರ್ಹತೆ ಪ್ರಮಾಣಪತ್ರ, ಜಾತಿ ಮೀಸಲಾತಿ, ಸ್ಥಳೀಯ ನಿವಾಸಿ ಸೇರಿದಂತೆ ಅಗತ್ಯ ದಾಖಲಾತಿಯನ್ನು ಹೊಂದಿಸಬೇಕು. ನಂತರ ಉಪ ನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ ಕಚೇರಿಯಲ್ಲಿ ಸಲ್ಲಿಸಬೇಕು.

ಅರ್ಜಿ ಸಮೂನೆ ಪಡೆಯುವ ವಿಳಾಸ.. ಉಪ ನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ನೆಹರು ಮಾರ್ಕೆಟ್​, ಮೊದಲನೇ ಮಹಡಿ, ವಿಜಯಪುರ. ಈ ಹುದ್ದೆಗೆ ಅಭ್ಯರ್ಥಿಗಳು ಅಕ್ಟೋಬರ್​ 16ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 6 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರಕ್ಕೆ vijayapura.nic.in ಈ ಜಾಲತಾಣ ಅಥವಾ 08352-250644 ಈ ಹೆಲ್ಪ್​ಲೈನ್​ಗೆ ಸಂಪರ್ಕ ಮಾಡಬಹುದಾಗಿದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅ.19 ಅರ್ಜಿ ಸಲ್ಲಿಕೆಗೆ ಕಡೆಯ ದಿನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.